ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಬಗ್ಗೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ್ ಅವರಿಗೆ ಸಮನ್ಸ್ ನೀಡಿದೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕ ಸಿ.ಟಿ.ಕುಮಾರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಲವು ವರ್ಷಗಳಿಂದ ಸಿದ್ದರಾಮಯ್ಯ ಅವರ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವ ಸಿ ಟಿ ಕುಮಾರ್ ಮೈಸೂರಿನಲ್ಲಿ ಸಿಎಂಗೆ ಸೇರಿದ ಎಲ್ಲಾ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿ ಟಿ ಕುಮಾರ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸಿಎಂ ಪತ್ನಿ ಬದಲಿ 14 ನಿವೇಶನಗಳನ್ನು ಪಡೆದ ವಿಚಾರದಲ್ಲಿ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರ್ಯಾಯ ನಿವೇಶನ ಹಂಚಿಕೆ ಬೆಳವಣಿಗೆ ನಡೆದ ಸಮಯದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರ್ ನಾಯಕ್ ಅವರಿಗೆ ಇಡಿ ಸಮನ್ಸ್ ನೀಡಿದೆ.
ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಈ ಪ್ರಕರಣ ನಡೆದಿದ್ದು, ಅಂದು ಪ್ರಾಧಿಕಾರ ಸ್ವಾಧೀನಪಡಿಸಿಕೊಂಡ ಜಮೀನು ಮತ್ತು ಸ್ವಾಧೀನ ಪ್ರಕ್ರಿಯೆಯಿಂದ ಜಮೀನು ಕೈಬಿಟ್ಟ ಬೆಳವಣಿಗೆಗಳ ಬಗ್ಗೆ ಸರಿಯಾದ ನಿಗಾ ವಹಿಸಿಲ್ಲ ಹಾಗೂ ಪರ್ಯಾಯ ನಿವೇಶನ ನೋಂದಣಿ ಮಾಡಿಕೊಡುವ ಸಮಯದಲ್ಲಿ ದಾಖಲೆಗಳನ್ನು ಪರಿಶೀಲಿಸಿಲ್ಲ ಒತ್ತಡಕ್ಕೆ ಮಣಿದು ಕೆಲಸ ಮಾಡಿಕೊಟ್ಟಿದ್ದಾರೆ ಎಂಬ ಆರೋಪವನ್ನು ಕುಮಾರ್ ನಾಯಕ್ ಎದುರಿಸುತ್ತಿದ್ದು, ಈ ಅಂಶಗಳ ಬಗ್ಗೆ ಮಾಹಿತಿ ಪಡೆಯಲು ಅವರಿಗೆ ಇಡಿ ಸಮನ್ಸ್ ನೀಡಿದೆ ಎನ್ನಲಾಗಿದೆ.
ಸಮನ್ಸ್ ನೀಡಿದ ಕೆಲ ಹೊತ್ತಿನಲ್ಲಿಯೇ ಸಂಸದ ಕುಮಾರ್ ನಾಯಕ ಅವರು ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿ ವಿಚಾರಣೆಗೊಳಪಟ್ಟರು. ಈ ಸಮಯದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಲಿಖಿತ ಪ್ರಶ್ನಾವಳಿಯನ್ನು ಸಂಸದರಿಗೆ ನೀಡಿದ್ದು, ಅದಕ್ಕೆ ಅವರು ಉತ್ತರ ನೀಡಿದ್ದಾರೆ. ಅದಾದ ನಂತರ ಮೌಖಿಕವಾಗಿಯೂ ಕೆಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.




