ದಾವಣಗೆರೆ: ನವಂಬರ್ 20ರಂದು ಮಧ್ಯಾಹ್ನ 12 ಗಂಟೆಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಲಿ., ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಟ್ರಾಮಾ ಕೇರ್ ಕಟ್ಟಡದ ಉದ್ಘಾಟನೆ ನೆರೆವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಗಳ ಉದ್ಘಾಟನೆ ಮಾಡುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ.ಶಾಂತನಗೌಡ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್.ಕೆ, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ಭಾಗವಹಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾ ಶಿವಕುಮಾರ್ ಕೆ.ಜಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ.ನವೀನ್ ಭಟ್ ವೈ, ನಿರ್ದೇಶಕರಾದ ಡಾ.ತ್ರಿವೇಣಿ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಹಾಗೂ ಇನ್ನಿತರರು ಉಪಸ್ಥಿತರಿರಲಿದ್ದಾರೆ.



