ಓ.ಬಿ.ಸಿ ಫೆಡರೇಷನ್ ಆಫ್ ಇಂಡಿಯ ವತಿಯಿಂದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಅಧ್ಯಕ್ಷ ಜೆ.ಎಂಜೇರಪ್ಪರವರಿಂದ ವಿದ್ಯಾರ್ಥಿಗಳ ಪರ ಹೋರಾಟ
ನ್ಯಾಯ ಕೊಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ
ಬೆಂಗಳೂರು: ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಓ.ಬಿ.ಸಿ.ಫೆಡರೇಷನ್ ಆಫ್ ಇಂಡಿಯ ಅಧ್ಯಕ್ಷ ಜೆ.ಎಂಜೇರಪ್ಪ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಎಸ್.ಶಿವಣ್ಣ, ಅಖಿಲ ಭಾರತ ಓಬಿಸಿ ವಿದ್ಯಾರ್ಥಿಗಳ ಸಂಘ ಅಧ್ಯಕ್ಷ ಕಿರಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಂ.ಪವನ್ ಸಿಂಗ್ ಅವರು ಐ.ಐ.ಎಂ.ನಲ್ಲಿ ಓಬಿಸಿ ಮತ್ತು ಎಸ್.ಸಿ./ಎಸ್.ಟಿ. ವಿದ್ಯಾರ್ಥಿಗಳಿಗೆ ಮೀಸಲಾತಿಯಲ್ಲಿ ತಾರತಮ್ಯ ವಿರೋಧಿಸಿ ಫ್ರೀಡಂ ಪಾರ್ಕನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಬರೆದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹಕ್ಕು ನೀಡಿದ್ದಾರೆ. ಆದರೆ ಹಿಂದುಳಿಗ ವರ್ಗ ಮತ್ತು ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ಐ.ಐ.ಎಂ.ನಲ್ಲಿ ಜಾತಿ ತಾರತಮ್ಯ ಮಾಡಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಇದರ ವಿರುದ್ದ ಸಾಂಕೇತಿಕ ಪ್ರತಿಭಟನೆ ಮಾಡಲಾಗುವುದು. ರಾಜ್ಯದ ಮುಖ್ಯಮಂತ್ರಿಗಳು ಕೂಡಲೆ ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಜೆ.ಎಂಜೇರಪ್ಪರವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಸಾಮಾಜಿಕ, ಶೈಕ್ಷಣಿಕ ಮತ್ತು ಸಂಪತ್ತು ದೇಶ ಜನರಿಗೆ ಸಮಾನ ಹಂಚಿಕೆಯಾಗಬೇಕು ಎಂದಿದ್ದಾರೆ. ಆದರೆ ಐ.ಐ.ಎಂ.ನಲ್ಲಿ ಓಬಿಸಿ ಮತ್ತು ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ನಿರ್ದೇಶಕರಾದ ಕೃಷ್ಣನ್ ಅನ್ಯಾಯ ಮಾಡುತ್ತಿದ್ದಾರೆ. ಇದರಿಂದ ಈ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುತ್ತಾರೆ. ಇಂತಹ ಘೋರ ಅನ್ಯಾಯ ಮಾಡುತ್ತಿರುವ ನಿರ್ದೇಶಕರನ್ನು ವಜಾ ಮಾಡಿ, ಸಾಮಾಜಿಕ ನ್ಯಾಯ, ವಿದ್ಯಾರ್ಥಿಗಳ ಪರ ಇರುವ ನಿರ್ದೇಶಕರನ್ನು ನೇಮಕ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.




