ಬಳ್ಳಾರಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಅಕ್ಷರ ಫೌಂಡೇಷನ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ನ ನಜೀರ್ ಸಭಾಂಗಣದಲ್ಲಿ ಗುರುವಾರ ಗಣಿತ ಕಲಿಕಾ ಆಂದೋಲನ-ಜಿಲ್ಲಾ ಮಟ್ಟದ ವಿಚಾರ ಸಂಕಿರಣ ನಡೆಯಿತು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಲಾ ಮಕ್ಕಳಲ್ಲಿ ಗಣಿತಾ ವಿಷಯದಲ್ಲಿ ಕಲಿಕಾಸಕ್ತಿ ಮೂಡಿಸಲು ವಿಚಾರ ಸಂಕಿರಣಗಳು ಮುಖ್ಯವಾಗಿದ್ದು, ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಂಡು ವಿಚಾರಗೋಷ್ಠಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಅಕ್ಷರ ಫೌಂಡೇಷನ್ನ ಕಾರ್ಯಾಚರಣೆ ಮತ್ತು ಸಮುದಾಯ ಅಭಿವೃದ್ಧಿಯ ಮುಖ್ಯಸ್ಥ ಶಂಕರ್ ನಾರಾಯಣ ಜೆ.ವಿ ಮಾತನಾಡಿ, ಶಾಲಾ ಮಟ್ಟದಲ್ಲಿ ಗಣಿತ ವಿಷಯದಲ್ಲಿ ಮಕ್ಕಳಿಗೆ ಗುಣಮಟ್ಟ ತರಬೇತಿ ನೀಡಲು, ಪ್ರೌಢಶಾಲಾ ಮಕ್ಕಳಲ್ಲಿನ ಕಲಿಕೆಯ ಸಾರಾಂಶವನ್ನು ಕಾರ್ಯಗತಗೊಳಿಸಲು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಆಡಳಿತದ ಉಪನಿರ್ದೇಶಕಿ ಉಮಾದೇವಿ, ಶಾಲಾ ಶಿಕ್ಷಣ ಇಲಾಖೆಯ ಅಭಿವೃದ್ಧಿಯ ಉಪನಿರ್ದೇಶಕ ಓ.ಆರ್ ಪ್ರಕಾಶ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಚಾರ ಗೋಷ್ಠಿ ನಡೆಸಿಕೊಟ್ಟರು.
ಬಳಿಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳ ಬಳ್ಳಾರಿ ಜಿಲ್ಲೆ ವರದಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಉತ್ತಮ ಫಲಿತಾಂಶ ಪಡೆದ ಜಿಲ್ಲೆಯಲ್ಲಿನ 25 ಶಾಲೆಗಳು ಮತ್ತು 25 ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಗ್ರಾಪಂ ಅಧ್ಯಕ್ಷರು, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ಇತರರು ಹಾಜರಿದ್ದರು.




