ದೆಹಲಿ: ರೈತರಿಗೆ ಸಹಕಾರ ಬ್ಯಾಂಕುಗಳ ಮೂಲಕ ಸಾಲ ನೀಡಲು ನಬಾರ್ಡ್ ನೀಡುತ್ತಿದ್ದ ಆರ್ಥಿಕ ನೆರವಿನ ಪ್ರಮಾಣ ಕಡಿಮೆ ಮಾಡಿದೆ. ಇದರಿಂದ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಿಎಂ ಸಿದ್ದರಾಮಯ್ಯ ನಿಯೋಗದೊಂದಿಗೆ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಕಳೆದ ವರ್ಷ ನಬಾರ್ಡ್ ಕರ್ನಾಟಕಕ್ಕೆ 5600 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿತ್ತು. ಆದರೆ ಈ ಬಾರಿ ಅದನ್ನು 2340 ಕೋಟಿ ರೂಪಾಯಿಗಳಿಗೆ ಇಳಿಕೆ ಮಾಡಿದೆ. ಇದರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ತಿಳಿಸಿದರು.
ಸರ್ಕಾರದ ಪರವಾಗಿ ಮನವಿ ಪತ್ರ ಸಲ್ಲಿಸಿದ ಅವರು, ಕೂಡಲೇ ಆರ್ಬಿಐ ಮತ್ತು ನಬಾರ್ಡ್ ಸಂಸ್ಥೆಗಳಿಗೆ ಸೂಚನೆ ನೀಡಿ ರಾಜ್ಯದ ರೈತರಿಗೆ ಆಗಿರುವ ಸಾಲದ ಹೊರೆಯನ್ನು ಸರಿಪಡಿಸಿ ಅನ್ಯಾಯವನ್ನು ಸರಿದೂಗಿಸಬೇಕು ಎಂದು ಮನವಿ ಮಾಡಿದರು.
2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗಳ ರಿಯಾಯಿತಿ ಸಾಲದ ಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನಬಾರ್ಡ್ 2,340 ಕೋಟಿ ರೂ.ಗಳಿಗೆ ಮಾತ್ರ ಅನುಮೋದನೆ ನೀಡಿದೆ. ಇದು ಕಳೆದ ವರ್ಷಕ್ಕಿಂತಲೂ ಶೇ.58 ರಷ್ಟು ಕಡಿಮೆಯಾಗಿದೆ ಎಂದು ವಿವರಿಸಿದರು.
ಆರ್ಬಿಐ ಸಾಮಾನ್ಯ ಸಾಲದ ನೀತಿ ಯನ್ನು ಕಡಿಮೆ ಮಾಡಿರುವುದರಿಂದಾಗಿ ಪ್ರಸಕ್ತ ವರ್ಷದ ರಿಯಾಯಿತಿ ದರ ಸಾಲದ ಮಿತಿಯನ್ನು ಕಡಿತ ಮಾಡಬೇಕಾಗಿದೆ ಎಂದು ನಬಾರ್ಡ್ ತಿಳಿಸಿದೆ. ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಮುಂಗಾರು ಚಟುವಟಿಕೆಗಳು ಚುರುಕುಗೊಂಡಿವೆ. ಹೀಗಾಗಿ ಅಲ್ಪಾವಧಿ ಕೃಷಿ ಸಾಲದ ಬೇಡಿಕೆ ಹೆಚ್ಚಿದೆ ಎಂದು ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ವಿವರಿಸಿದ್ದಾರೆ.
2019-20ನೇ ಸಾಲಿನಲ್ಲಿ 4,200 ಕೋಟಿ ರೂ.ಗಳ ಕೃಷಿ ಸಾಲಕ್ಕೆ ಮಂಜೂರಾತಿ ನೀಡಲಾಗಿತ್ತು. ನಂತರ ಹೆಚ್ಚುವರಿಯಾಗಿ 700 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದ್ದು, ಶೇ.15ರಷ್ಟು ಹೆಚ್ಚಿಸಲಾಗಿತ್ತು. 2020-21ನೇ ಸಾಲಿನಲ್ಲಿ 5,500 ಕೋಟಿ ರೂ.ಗೆ ಅನುಮೋದನೆ ನೀಡಿ, 1,300 ಕೋಟಿ ರೂ.ಗಳ ಹೆಚ್ಚುವರಿಯೊಂದಿಗೆ ಶೇ.27 ರಷ್ಟು, 2022-23ನೇ ಸಾಲಿನಲ್ಲಿ 5,550 ಕೋಟಿ ರೂ.ಗಳ ಜೊತೆಗೆ 66 ಕೋಟಿ ರೂ.ಗಳ ಹೆಚ್ಚುವರಿಯೊಂದಿಗೆ ಶೇ.1 ರಷ್ಟು, 2023-24ನೇ ಸಾಲಿನಲ್ಲಿ 5,600 ಕೋಟಿ ರೂ.ಗಳ ಜೊತೆಗೆ 55 ಕೋಟಿ ರೂ. ಹೆಚ್ಚುವರಿಯೊಂದಿಗೆ ಶೇ.1 ರಷ್ಟು ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿತ್ತು ಎಂದಿದ್ದಾರೆ.
2021-22ನೇ ಸಾಲಿನಲ್ಲಿ 5,483 ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, 16 ಕೋಟಿ ರೂ.ಗಳನ್ನು ಕಡಿತ ಮಾಡಿ ಶೇ.1 ರಷ್ಟು ತಗ್ಗಿಸಲಾಗಿತ್ತು. ಈ ವರ್ಷ 2340 ಕೋಟಿ ರೂ.ಗಳಿಗೆ ಮಾತ್ರ ಮಂಜೂರಾತಿ ನೀಡಿ 3260 ಕೋಟಿ ರೂ.ಗಳನ್ನು ಕಡಿತ ಮಾಡುವ ಮೂಲಕ ಶೇ.58 ರಷ್ಟು ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.




