ರಾಮನಗರ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ. ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ ಮಾಡುತ್ತಿದ್ದರು. ಈ ಎಲ್ಲಾ ಟೀಕೆಗಳಿಗೂ ಮತದಾರರು ಉತ್ತರ ನೀಡಿದ್ದಾರೆ ಎಂದರು.
ಬಿಜೆಪಿಯವರು ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದರು. ಏನೂ ಇಲ್ಲದಿದ್ದರೂ ಬಿಜೆಪಿಯವರು ಹಗರಣ ಇದೆ ಎಂದು ಆರೋಪ ಮಾಡುತ್ತಿದ್ದರು. ಉಪ ಚುನಾವಣೆಯಲ್ಲಿ ಅದಕ್ಕೆಲ್ಲಾ ಶಾಸ್ತಿಯಾಗಿದೆ ಎಂದರು.




