ದೇವೇಗೌಡರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

1 year ago

ಬೆಂಗಳೂರು: ಮಾಜಿ ಪ್ರಧಾನಿಗಳಾದ ದೇವೇಗೌಡರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ಇದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿಪಿ ಯೋಗೇಶ್ವರ್ ಗೆ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾತನಾಡಿದ ಅವರು, ಈಗ ದೇವೆಗೌಡರ ವಯಸ್ಸು 92 ವರ್ಷ. ದೇಶ ಮತ್ತು ರಾಜ್ಯ ಕಟ್ಟಲು ಅವರ ಮಾರ್ಗದರ್ಶನ ಬೇಕು ಎಂದು ಅನೇಕ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಹಾಗಾಗಿ ಇಲ್ಲಿ ಅಧಿಕಾರ ದಾಹಕ್ಕೆ, ಅಧಿಕಾರಕ್ಕೆ ಅಂಟಿಕೊಂಡು ದೇವೇಗೌಡರು ರಾಜಕಾರಣ ಮಾಡುತ್ತಿಲ್ಲ ಎಂದರು.

ದೇವೇಗೌಡರ 62 ವರ್ಷಗಳ ಅವರ ರಾಜಕೀಯ ಬದುಕಿನಲ್ಲಿ ಏನನ್ನೂ ಅಪೇಕ್ಷೆ ಇಟ್ಟುಕೊಂಡವರಲ್ಲ. ಅಷ್ಟು ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ಕೇವಲ ಮೂರೂವರೆ ವರ್ಷ ಮಾತ್ರ ಅಧಿಕಾರದಲ್ಲಿ ಇದ್ದರು. ಈಗೇನು ಅವರು ಮತ್ತೆ ಪ್ರಧಾನಿ ಆಗಲಿಕ್ಕೆ ರಾಜಕೀಯ ಮಾಡುತ್ತಿದ್ದಾರೆಯೇ? ಅವರು ನಿವೃತ್ತಿ ಹೊಂದಬೇಕಾ? ಎಂದು ಕೇಳಿದರು.

ಚನ್ನಪಟ್ಟಣದಲ್ಲಿ ಯಾವುದೇ ಕಾರ್ಯಕರ್ತ ನಿಂತರೂ ನಮ್ಮ ಸಾಂಪ್ರದಾಯಿಕವಾಗಿ ಕೊನೇಪಕ್ಷ 60 ಸಾವಿರ ಮತಗಳು ಬರುತ್ತಿದ್ದವು. ಈಗ ಆ ಪ್ರಮಾಣ 87 ಸಾವಿರಕ್ಕೆ‌ ಹೋಗಿ ಮುಟ್ಟಿದೆ. ಜನ ನಮ್ಮನ್ನು ಕೈ ಬಿಟ್ಟಿಲ್ಲ ಎಂದರು.

ಒಂದು ಸಮುದಾಯದ ಪರವಾಗಿ ದೇವೇಗೌಡರು ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿದ್ದರು. ಅವರ ಪರವಾಗಿ ಅನೇಕ ನಿರ್ಣಯಗಳನ್ನು ಕೈಗೊಂಡಿದ್ದರು. ಮೀಸಲಾತಿ ನೀಡಿದ್ದರು. ಆದರೆ ಈ ಚುನಾವಣೆಯಲ್ಲೂ ಆ ಸಮುದಾಯವನ್ನು ಕಡೆಗಣಿಸಬಾರದು, ಅವರನ್ನು ವಿಶ್ವಾಸಕ್ಕೆ ತಗೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ದೆವು. ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅಂತ ಆ ಸಮುದಾಯದವರು ನಿನ್ನೆ ಸ್ಪಷ್ಟ ಸಂದೇಶ‌ ಕೊಟ್ಟಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಬೇರೆ ಸಮುದಾಯಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೋ ಅದನ್ನು ಮಾಡ್ತೇವೆ ಎಂದರು.

ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು; ಅವರು ಹಿರಿಯರು, ರಾಜಕೀಯದಲ್ಲಿ ಅವರಿಗೆ ಬಹಳ ಅನುಭವ ಇದೆ. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೋ ಗೊತ್ತಿಲ್ಲ. ಅವರು ನಮ್ಮ ಪಕ್ಷದ ಕೋರ್ ಕಮಿಟಿ ನಾಯಕರು, ಅವರಿಗೆ ಯಾವ ಗೌರವ ಕೊಡಬೇಕೋ ಅದನ್ನು ನಾವು ಕೊಡ್ತೇವೆ ಎಂದರು.

Leave a Reply