ಬೆಂಗಳೂರು: ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಸಮಯದಲ್ಲಿ ಸಂವಿಧಾನ ಬದಲಾಯಿಸಬೇಕು ಎಂದು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ಆಗ್ರಹಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಪೇಜಾವರಶ್ರೀ ಹಾಗೂ ಇತರೆ ಮಠಾಧೀಶರು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆಯೂ ಹೌದು ಎಂದರು.
ಸಂವಿಧಾನ ವಿರೋಧಿ ಸಂಘಟನೆ ಆರ್ ಎಸ್ ಎಸ್ ನೂರು ವರ್ಷಕ್ಕೆ ಕಾಲಿಡುತ್ತಿರುವುದಕ್ಕೂ, ಸಂವಿಧಾನ ಬದಲಾಯಿಸಬೇಕು ಎಂದು ಪರಿವಾರ ನಿಷ್ಟೆಯ ಯತಿಗಳು ಬೀದಿಗಿಳಿದು ಮಾತಾಡುತ್ತಿರುವುದಕ್ಕೂ ಸಂಬಂಧವಿದೆ. ಇದು ಸಂಘ ಪರಿವಾರದ ನೂರು ವರ್ಷಗಳ ಸಂಭ್ರಮಾಚಾರಣೆಯ ಕಾರ್ಯಕ್ರಮದ ಗುಪ್ತ ಸೂಚಿ ಇರುವುದು ಸ್ಪಷ್ಟ ಎಂದರು.
ಬುದ್ಧ, ಬಸವಾದಿ ಶಿವ ಶರಣರು, ನಾರಾಯಣ ಗುರುಗಳಂತಹ ಸಮಾಜ ಸುಧಾರಕರ ಆಶಯಗಳು ಹಾಗೂ ಗಾಂಧಿ,ನೆಹರೂ,ಬಾಬಾ ಸಾಹೇಬರಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ “ಸರ್ವ ಧರ್ಮ, ಸಹಬಾಳ್ವೆ”ಯ ತಿರುಳಿರುವ ಸಂವಿಧಾನವನ್ನು ಬದಲಾಯಿಸುವ ಹೊರಟಿರುವ ಪೇಜಾವರರು ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷಪಡಿಸಲಿ ಎಂದು ಆಗ್ರಹಿಸಿದರು.
ಪೇಜಾವರರು ಬಯಸುತ್ತಿರುವ ಗೌರವ ನೀಡುವ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿಂದ ದಲಿತರು-ಶೂದ್ರರು ಶ್ರೇಷ್ಟತೆಯ ವ್ಯಸನಕ್ಕೆ ತಲೆಬಾಗಬೇಕೆ? ಮಹಿಳೆಯರು ಅತ್ಯಾಚಾರಿಗಳನ್ನು ಆರಾಧಿಸಬೇಕೆನ್ನುವ ವ್ಯವಸ್ಥೆ ಇರಬೇಕೆ? ಜೀತದಾರರು, ಶ್ರಮಿಕ ವರ್ಗ ಮಾಲೀಕರ ಅಡಿಯಾಳಾಗಿರಬೇಕೆ? ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಆದರೆ ಪೇಜಾವರ ಸ್ವಾಮೀಜಿಗಳು ಯಾವ ವ್ಯವಸ್ಥೆಯಲ್ಲಿ ತಮ್ಮ ಗೌರವವನ್ನು ಬಯಸುತ್ತಿದ್ದಾರೆ ಎಂದೂ ಬಹಿರಂಗವಾಗಿ ಹೇಳಲಿ ಎಂದು ಒತ್ತಾಯಿಸಿದರು
ಸ್ವಾತಂತ್ರ್ಯ ಪೂರ್ವ ಭಾರತದ ಇತಿಹಾಸದ ಬಗ್ಗೆ ಪುರಾವೇ ಇಲ್ಲದೆ ಮಾತಾಡಿರುವ ಸ್ವಾಮೀಜಿಗಳು ಒಂದಿಷ್ಟು ಇತಿಹಾಸ ಅರಿತು ಮಾತಾಡಲಿ. ಹರಿದು ಹಂಚಿ ಹೋಗಿದ್ದ ದೇಶವನ್ನು ಒಕ್ಕೂಟ ವ್ಯವಸ್ಥೆಯನ್ನಾಗಿ ಮಾಡಿ ಭಾರತವಾಗಿಸಲು ನಮ್ಮ ಪೂರ್ವಜರ ಪರಿಶ್ರಮವನ್ನು ಅವಮಾನಿಸುವ ಹಕ್ಕೂ ಸ್ವಾಮೀಜಿಗಳಿಗಿಲ್ಲ ಎಂದು ಕಿಡಿಕಾರಿದರು.
ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿ ಮಾಡಲು ಹೊರಟಿರುವ ಸಂಘ ಪರಿವಾರದ ಹಿಡನ್ ಅಜೆಂಡಾವನ್ನೇ ಪೇಜಾವರರು ಮುಂದುವರೆಸುತ್ತಿದ್ದಾರೆ. ದಲಿತ-ಹಿಂದುಳಿದ-ಶೋಷಿತ ಸಮುದಾಯಗಳು ಸೇರಿದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ-ಘನತೆಯಿಂದ ಬದುಕುಬೇಕಾದ ವ್ಯವಸ್ಥೆ ಇರುವುದು ಸಂವಿಧಾನದಡಿಯಲ್ಲಿ ಮಾತ್ರ ಎಂದರು.
ಸಾವಿರಾರು ವರ್ಷಗಳ ಶ್ರೇಣಿಕೃತ ವ್ಯವಸ್ಥೆಯನ್ನು ಪೋಷಿಸುತ್ತಿರುವ ಪೇಜಾವರ ಸ್ವಾಮೀಜಿಗಳಿಗೆ ಸಂವಿಧಾನದಡಿಯಲ್ಲಿ ಬದುಕುವ ಹಕ್ಕಿದೆ. ಸಮಾನತೆ ಬಿತ್ತಿದ ನಮ್ಮ ಪೂರ್ವಜರನ್ನು ಅವಮಾನಿಸುವ, ಸಂವಿಧಾನಕ್ಕೆ ದ್ರೋಹ ಬಗೆಯುವ ಹಕ್ಕಿಲ್ಲ ಎಂಬುದು ಮನವರಿಕೆಯಾಗಲಿ ಎಂದರು.




