ಸನ್ಮಾನ್ಯ ಶ್ರೀ @kharge ಅವರೇ, ಸಾಧನೆಗಳಿದ್ದರೆ ತಾನೆ ವರದಿ ಕೊಡೋದಕ್ಕೆ.
ಪಾಪ ತಾವು ರಾಜ್ಯದಲ್ಲಿ ಅಧಿಕಾರ ತ್ಯಾಗ ಮಾಡಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಕಟ್ಟಲು ಶ್ರಮ ಪಡುತ್ತಿದ್ದೀರಿ. ಹಾಗಾಗಿ ಕರ್ನಾಟಕದಲ್ಲಿ @INCKarnataka ಸರ್ಕಾರ ಏನು ಮಾಡುತ್ತಿದೆ, ರಾಜ್ಯದಲ್ಲಿ ತಮ್ಮ ಪಕ್ಷದ ಗೋಳೇನು ಎನ್ನುವ ಬಗ್ಗೆ ತಮಗೆ ಬಹುಶಃ ಮಾಹಿತಿ ಇಲ್ಲ ಎಂದು ಕಾಣುತ್ತದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ನಾನು ಈಗಾಗಲೇ ಹಲವು ಬಾರಿ ಹೇಳಿರುವಂತೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇವಲ “ಗುರುವಾರದ ಸರ್ಕಾರ”. ಗುರುವಾರದಂದು ಸಂಪುಟ ಸಭೆ ನಡೆಯುವ ದಿನ ಮಾತ್ರ ಮುಖ್ಯಮಂತ್ರಿಗಳು, ಬಹುತೇಕ ಸಚಿವರು, ಅಧಿಕಾರಿಗಳು ವಿಧಾನಸೌಧದಲ್ಲಿ, ವಿಕಾಸಸೌಧದಲ್ಲಿ ಕಾಣಿಸಿಕೊಳ್ಳುತ್ತಾರೆ. ಇನ್ನು ಬಾಕಿ ದಿನ ಎಲ್ಲರೂ ತಮ್ಮದೇ ಲೋಕದಲ್ಲಿ ಇರುತ್ತಾರೆ, ತಮ್ಮದೇ ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿರುತ್ತಾರೆ.
ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿಗಳಿಗೆ ಕಾನೂನು ಹೋರಾಟ, ಕುರ್ಚಿ ಉಳಿಸಿಕೊಳ್ಳುವ ಚಿಂತೆ. ಮುಖ್ಯಮಂತ್ರಿ ಆಗಲು ತುದಿಗಾಲಲ್ಲಿ ನಿಂತಿರುವ ಡಿಸಿಎಂ ಸಾಹೇಬರಿಗೆ ಹಗಲು, ರಾತ್ರಿ ಅದೇ ಕನಸು. ಇನ್ನು ಉಳಿದ ಕೆಲವರಿಗೆ ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಏನಾದರೂ ಲಾಭವಿದೆಯೇ ಎನ್ನುವ ಆಸೆ. ಇನ್ನು ಹಿರಿಯ ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಒಂದು ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಚಿಂತೆ.
ಇನ್ನು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ತಮಗೆ ತಿಳಿದೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ “ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕೋದಕ್ಕೂ ದುಡ್ಡಿಲ್ಲ” ಅಂತ ತಾವೇ ಹೇಳಿದ್ದೀರಿ.
ಪರಿಸ್ಥಿತಿ ಹೀಗಿರುವಾಗ ಆಡಳಿತ ಹಳಿ ತಪ್ಪದೇ ಇರುತ್ತದೆಯೇ? ಪಾಪ ಕಾಂಗ್ರೆಸ್ ಸಚಿವರು ಏನಾದರೂ ಸಾಧನೆ ಮಾಡಿದ್ದರೆ ತಾನೇ ತಮಗೆ ವರದಿ ಕೊಡೋಕೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




