ಹಾಸನ: ಭೀಕರ ರಸ್ತೆ ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಬಲಿಯಾಗಿದ್ದಾರೆ. ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೊಲೀಸ್ ತರಬೇತಿ ಮುಗಿಸಿ ಮೊದಲ ಕೆಲಸಕ್ಕೆ ನಿಯೋಜನೆಗೆ ಸಂಭ್ರಮದಲ್ಲಿ ತೆರಳುತ್ತಿದ್ದ ಹರ್ಷವರ್ಧನ್ ಕೆಲಸಕ್ಕೆ ಸೇರುವ ಮುನ್ನವೇ ಕಾಲವಶರಾಗಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಹರ್ಷವರ್ಧನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ನಡೆದಿದೆ.
ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಐಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆಯಾಗಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸಿದ ಅವರು ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕೆಲಸಕ್ಕೆ ವರದಿ ಮಾಡಿಕೊಳ್ಳಲು ಬರುತ್ತಿದ್ದರು.
ಅವರು ಮೈಸೂರಿನಿಂದ ಹೊಳೆನರಸೀಪುರ ಮಾರ್ಗವಾಗಿ ಜೀಪ್‌ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆ ಗಡಿ ಬಳಿ ಜೀಪ್‌ನ ಟೈರ್ ಸ್ಫೋಟವಾಗಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು.
ಅಪಘಾತದಲ್ಲಿ ಚಾಲಕ ಮಂಜೇಗೌಡ ಅವರಿಗೂ ಗಾಯಗಳಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಹರ್ಷವರ್ಧನ್ ಬಲಿಯಾಗಿದ್ದಾರೆ.



