ಬೆಂಗಳೂರು: ಲೋಕಸಭಾ ಚುನಾವಣೆ ಸಮಯದಲ್ಲಿ ಬಿಜೆಪಿ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬಿಜೆಪಿ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದೆ ಎಂದು ಆರೋಪಿಸಿ ಆದರ್ಶ್ ಅಯ್ಯರ್ ಎನ್ನುವರು ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ಮತ್ತು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇದು ರಾಜಕೀಯ ಪ್ರೇರಿತವಾಗಿದ್ದು ಎಫ್ಐಆರ್ ರದ್ದುಪಡಿಸಿವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಅರ್ಜಿದಾರರ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದ್ದರು. ಇನ್ನು ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದರು. ಈ ವಾದ ಪ್ರತಿವಾದ ಆಲಿಸಿದ್ದ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಬಲವಂತದ ಕ್ರಮಕೈಗೊಳ್ಳದಂತೆ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಈ ಕುರಿತು ಇಂದು ಆದೇಶ ಹೊರಡಿಸಿದೆ.




