ಶಿವಮೊಗ್ಗ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಪಿಯುಸಿ ಸಮಾನಾಂತರ(ಪಿಯು & ಸಮಾನಂತರ ಕೋರ್ಸ್ ಗಳು) ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ ಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನ.30 ವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದು.




