ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ನಮ್ಮಲ್ಲಿ ಯಾವುದೇ ಭೇದಭಾವ ಇಲ್ಲ. ನೀವು ಹುಟ್ಟು ಹಾಕುತ್ತಿದ್ದೀರಿ. ನಿಮ್ಮ ಮನೆ ಐದಾರು ಬಾಗಿಲು ಆಗಿವೆ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದು ಗೊತ್ತಾಗುತ್ತಿಲ್ಲ. ನಮ್ಮಲ್ಲಿ ಯಾರೂ ಗುಂಪುಗಾರಿಕೆ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಹಾಸನದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತ್ಯತೀತ ಎಂದು ಹೇಳಿಕೊಂಡು 25 ವರ್ಷಗಳಿಂದ ಹಾಸನದ ಜನರಿಗೆ ಮಂಕುಬೂದಿ ಎರಚಿದ ಜೆಡಿಎಸ್ನವರು, ಈಗ ಕೋಮುವಾದಿ ಬಿಜೆಪಿ ಜೊತೆಗೆ ಸೇರಿ ಮಂತ್ರಿಯಾಗಲು ನಾಚಿಕೆ ಆಗುವುದಿಲ್ಲವೇ? ಕೂಡಲೇ ಜಾತ್ಯತೀತ ಎನ್ನುವ ಪದವನ್ನು ತೆಗೆದು ಹಾಕಿ ಎಂದು ಒತ್ತಾಯಿಸಿದರು.
ಬಿಜೆಪಿಯವರು ರಾಜ್ಯದಲ್ಲಿ ಹಿಜಬ್, ಗೋಮಾಂಸದಂತಹ ವಿಷಯಗಳನ್ನು ತೆಗೆದುಕೊಂಡು ಬಂದರು. ಏನೂ ಆಗಲಿಲ್ಲ. ಈಗ ಮುಡಾ ಹಗರಣ, ವಕ್ಫ್ ವಿವಾದಗಳನ್ನು ಇಟ್ಟುಕೊಂಡು ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ನಾವು ಅಲ್ಪಸಂಖ್ಯಾತರ ಪರವಾಗಿ ಇರುವುದು ನಿಜ. ಆದರೆ, ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಅತಿಹೆಚ್ಚು ನೋಟಿಸ್ ಕೊಟ್ಟವರು ಬಿಜೆಪಿಯವರು ಎಂದರು.
ಮುಡಾ ಹಗರಣದ ಹೆಸರಿನಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರೆ, ಅದು ಕೈಗೂಡುವುದಿಲ್ಲ. ಬದಲಾಗಿ ಉಪ ಚುನಾವಣೆಯ 3 ಸ್ಥಾನಗಳಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದರು.



