ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿಯ ಯುವಜನ ಮೇಳ ಹಾಗೂ ಯುವ ಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸಲು ಪರಿಶಿಷ್ಟ ಜಾತಿಯ ಯುವಕ ಯವತಿಯರಿಗೆ ಕಲಾ ಪ್ರಕಾರಗಳ ಜಾನಪದ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಈ ತರಬೇತಿ ಡಿ. 10 ರಿಂದ 17 ರವರೆಗೆ 8 ದಿನಗಳ ಕಾಲ 50 ಜನರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದ್ದು ಶಿಬಿರಾರ್ಥಿಗಳಿಗೆ ಲಘು ಉಪಹಾರ ಹಾಗೂ ಹೊರ ಜಿಲ್ಲೆಯವರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಆಸಕ್ತರು ಡಿ.09 ರೊಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




