ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜನ ಸಂಪರ್ಕ ಸಭೆ
ಬಳ್ಳಾರಿ: ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ತಿಳಿಸಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಆರ್.ವಸಂತ್ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಸಂಗಮೇಶ್, ಮಹಮ್ಮದ್ ರಫಿ ನೇತೃತ್ವದಲ್ಲಿ ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.
ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ: ಡಿ.11 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ ತಹಶೀಲ್ದಾರರ ಕಚೇರಿ ಸಭಾಂಗಣ ಮತ್ತು ಡಿ.13 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ದೂರುಗಳಿದ್ದಲ್ಲಿ ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು.



