ಬೆಂಗಳೂರು: ದೇಶದ ಧೀಮಂತ ಮುತ್ಸದ್ಧಿ, ನಾಡಿನ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನ ನನಗೆ ಅಪಾರ ನೋವು ತಂದಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ಸಂತಾಪವನ್ನು ವ್ಯಕ್ತಪಡಿಸಿದ್ದು, ಬೆಂಗಳೂರು ನಗರವು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಗ್ಗುರುತಾಗುವಲ್ಲಿ ಎಸ್ ಎಂ ಕೃಷ್ಣ ಅವರ ಶ್ರಮ ಅಪಾರ. ಅತ್ಯುತ್ತಮ ಆಡಳಿತಗಾರರಾಗಿದ್ದ ಸನ್ಮಾನ್ಯರು ತನ್ನ ಸನ್ನಡತೆ, ಸುಸಂಸ್ಕೃತ ವ್ಯಕ್ತಿತ್ವದಿಂದ ಸದಾ ನೆನಪಿನಲ್ಲಿ ಉಳಿಯುತ್ತಾರೆ ಎಂದಿದ್ದಾರೆ.
ಇಪ್ಪತ್ತು ವರ್ಷಗಳ ಹಿಂದೆ ಎಸ್ ಎಂ ಕೃಷ್ಣ ಅವರ ವಿರುದ್ಧ ನಾನು ಚಾಮರಾಜಪೇಟೆ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದೆ. ರಾಜಕೀಯವಾಗಿ ನಾವು ಬೇರೆ ಬೇರೆ ದಿಕ್ಕಿನಲ್ಲಿದ್ದರೂ ಎಸ್ ಎಂ ಕೃಷ್ಣರವರು ಒಬ್ಬ ಒಳ್ಳೆಯ ಹಿರಿಯ ಸ್ನೇಹಿತರಾಗಿದ್ದರು ಎಂದರು.
ಅಗಲಿದ ಅವರ ದಿವ್ಯಾತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಈ ನೋವು ನೀಗಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.




