ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಂಭವವಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಬಂಗಾಳ ಕೊಲ್ಲಿಯ ತಮಿಳುನಾಡು, ಶ್ರೀಲಂಕಾ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದ್ದು ತುಂತುರು ಮಳೆಯಾಗುತ್ತಿದೆ.
ಶುಕ್ರವಾರ, ಶನಿವಾರ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನ ಘೋಷಿಸಲಾಗಿದೆ.
ಇದರ ಬೆನ್ನಲ್ಲೇ ಡಿ.16ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಡಿ.17-18ಕ್ಕೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




