ಬೆಳಗಾವಿ: ಕೇಂದ್ರೀಯ ಶಾಲೆಗಳ ಮಟ್ಟಕ್ಕೆ ರಾಜ್ಯದ ಶಾಲೆಗಳಲ್ಲೂ ಕಲಿಸಬೇಕು ಎಂಬ ದೃಷ್ಟಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕೇಂದ್ರೀಯ ಪಠ್ಯ ಕ್ರಮ ಅನುಸರಿಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದರು.
ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು, 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲ ವಾಗಲಿದೆ ಎಂದರು.




