ಅತ್ತೆ – ಸೊಸೆ ನಡುವೆ ಜಗಳವಾಗುತ್ತದೆ, ಸಂಸಾರ ಒಡೆಯುತ್ತದೆ ಎಂದವರಿಗೆ ಜನರಿಂದ ತಪರಾಕಿ: ಸಿದ್ದರಾಮಯ್ಯ
ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ ಎಂದಿದ್ದಾರೆ.
ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ತಮ್ಮ ಸರ್ಕಾರದ ಯೋಜನೆಯನ್ನು ಸಮರ್ಥಿಸಿಕೊಳ್ಳುವುದರ ಜೊತೆಗೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.




