ಬೆಳಗಾವಿ: ಶಾಲಾ ಪ್ರವಾಸಕ್ಕೆಂದು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿದ ಮಕ್ಕಳಿಗೆ ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅಂದು ಶರಣರು ಸಾರಿದ ಸಮಾನತೆ, ಜಾತ್ಯತೀತತೆ, ಸಹಬಾಳ್ವೆ, ವ್ಯಕ್ತಿ ಸ್ವಾತಂತ್ರ್ಯ ಘನತೆಯ ಬದುಕಿನ ಹಕ್ಕುಗಳು ಇಂದು ನಮ್ಮ ಸಂವಿಧಾನದ ಆಶಯಗಳಾಗಿವೆ. ಇವು ಪ್ರತಿಯೊಬ್ಬರ ಆಶಯಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಶ್ವಮಾನವರಾಗಿ ಹುಟ್ಟುವ ಮಕ್ಕಳು ಜಾತಿ, ಧರ್ಮ, ವರ್ಣ, ಕಂದಾಚಾರ ಮುಂತಾದ ಸಂಕುಚಿತ ಚಿಂತನೆಯ ಪ್ರಭಾವಕ್ಕೆ ಒಳಗಾಗಿ ಅಲ್ಪಮಾನವರಾಗುತ್ತಿದ್ದಾರೆ ಎಂದರು.
ಮಹಾಪುರುಷರ ಜೀವನಾದರ್ಶಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ತಿಳಿಸುವ ಮೂಲಕ ಅವರನ್ನು ಈ ಜಾತಿ, ಧರ್ಮ, ಮೂಢನಂಬಿಕೆಗಳ ಅಲ್ಪತನದಿಂದ ಮುಕ್ತಗೊಳಿಸಿ ವಿಶ್ವಮಾನವರನ್ನಾಗಿಸೋಣ ಎಂದು ಅವರು ಇದೇ ವೇಲೆ ಕರೆ ನೀಡಿದರು.




