ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದ ಅವರು,ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದರು.
ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ ಎಂದರು.
ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ. ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ ಎಂದರು.
2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.
ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದಂತೆ ನಿರ್ಣಯಕ್ಕೆ ಬರಲಾಗುವುದು ಎಂದರು.
ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.




