ಬಳ್ಳಾರಿ: ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಂಬ್ಬಂದಿಗಳೊಂದಿಗೆ ಜಂಟಿಯಾಗಿ ಅನೌಪಚಾರಿಕ ಪಡಿತರ ಪ್ರದೇಶದ 4128.44 ಕ್ವಿಂ. ಅಕ್ಕಿ ಮತ್ತು 63.20. ಕ್ವಿಂ ಗೋಧಿಯನ್ನು ಜಪ್ತಿ ಮಾಡಿ, ಅಗತ್ಯ ವಸ್ತುಗಳ ಕಾಯ್ದೆ 1955 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಡಿ.26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಪಿಎಂಸಿ ಗೋದಾಮಿನಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅನೌಪಚಾರಿಕ ಪಡಿತರ ಪ್ರದೇಶ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
ಆಸಕ್ತ ಬಿಡ್ಡುದಾರರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು, ಅನೌಪಚಾರಿಕ ಪಡಿತರ ಪ್ರದೇಶ ಬಳ್ಳಾರಿ, ಇವರ ಹೆಸರಿನಲ್ಲಿ 2 ಲಕ್ಷ ರೂ.ಗಳ ಡಿಡಿಯನ್ನು ತೆರೆದು, ಡಿ.24ರ ಸಂಜೆ 5.30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಅನೌಪಚಾರಿಕ ಪಡಿತರ ಪ್ರದೇಶ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.




