ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ 3 ದಿನಗಳ ಉಚಿತ ಉದ್ಯಮಶೀಲತಾ ತರಬೇತಿ ಶಿಬಿರ

4 years ago

ಉದ್ಯೋಗಾಕಾಂಕ್ಷಿಗಳಿಗೆ ಆಶಾಕಿರಣ

ನಿರುದ್ಯೋಗಿ ಯುವಕ, ಯುವತಿಯರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಸುವರ್ಣಾವಕಾಶ

ಉದ್ಯಮಶೀಲತಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆಗಳನ್ನು ಸ್ಥಾಪಿಸಲು ಆಸಕ್ತಿ ಇರುವ  ನಿರುದ್ಯೋಗಿ ಯುವಕ, ಯುವತಿಯರಿಗೆ 3 ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು 2022, ಫೆಬ್ರವರಿ 12 ರಿಂದ 14ರವರೆಗೆ ನಡೆಸಲಾಗುವುದು.

ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ ಸಿಗುವ ಸಾಲಸೌಲಭ್ಯಗಳ ಬಗ್ಗೆ, ಮಾರುಕಟ್ಟೆ ಸಮೀಕ್ಷೆ, ಉದ್ದಿಮೆಯ ಆಯ್ಕೆ, ಯೋಜನಾ ವರದಿಯ ತಯಾರಿಕೆ (ಪ್ರಾಜೆಕ್ಟ್ ರಿಪೋರ್ಟ್) ಹಾಗು ಸ್ವಯಂ ಉದ್ಯೋಗಕ್ಕೆ ಅಗತ್ಯವಾದ ಎಲ್ಲ ಕೌಶಲ್ಯಗಳನ್ನು ಕಲಿಸಲಾಗುವುದು.

ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ಆಸಕ್ತ ಸಾಹಸಿ ಯುವಕ – ಯುವತಿಯರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡುವ ಮೂಲಕ ಹೆಸರನ್ನು ನೋಂದಾಯಿಸಿ, ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ಸತೀಶ್ ಜಾರಕಿಹೊಳಿ ಫೌಂಡೇಷನ್ ಪರವಾಗಿ ರವೀಂದ್ರ ನಾಯ್ಕರ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಹೆಸರು ನೋಂದಾಯಿಸಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು: 9620711704, 9535372799

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಣಿ ಮಾಡಿ https://forms.gle/QYovqZ3qzLQWGXw4A

Leave a Reply