ಚಾಮರಾಜನಗರ : ಮುಂದಿನ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಸುವಂತೆ ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಹಾಗೂ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿಎಂ ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕನ್ನಡ ಭಾಷೆ ನೆಲ ಜಲ ಸಾಹಿತ್ಯ ಕಲೆ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಮತ್ತು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ನಡೆಸಲಾಗುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಭಾಷಾಭಿಮಾನದ ಕೊರತೆಯಿಂದ ಹಾಗೂ ಅನ್ಯಭಾಷಿಕರ ಹಾವಳಿಯಿಂದ ಕನ್ನಡ ಭಾಷೆಗೆ ಕೊಡಲಿ ಪೆಟ್ಟು ಬೀಳುತ್ತಿರುವ ಗಡಿಭಾಗದಲ್ಲಿ ನಡೆಸಿದರೆ ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದಿದ್ದಾರೆ.
ಜಾಗತೀಕರಣದ ಪರಿಣಾಮ ಪೋಷಕರಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗಿದೆ ಹೀಗಾಗಿ ಕನ್ನಡ ಭಾಷೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಾಗಿದೆ ಆದುದರಿಂದ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕನ್ನಡದಲ್ಲೇ ಸಿಗುವಂತೆ ಕಾನೂನು ರೂಪಿಸಲು ಸರ್ಕಾರ ಮುಂದಾಗಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಕಾನೂನು ಜಾರಿಗೆ ತರಲು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ಕಾರವನ್ನು ಒತ್ತಾಯಿಸುವ ಕೆಲಸ ಆಗಬೇಕು. ಜೊತೆಗೆ, ಸಮ್ಮೇಳನದಲ್ಲಿ ಕೈಗೊಳ್ಳುವ ನಿರ್ಣಯಗಳು ಜಾರಿಯಾಗುವಂತಾಗಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.



