ಕಾಂಗ್ರೆಸ್ ಮುಖಂಡ, ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿರವರ ಹುಟ್ಟುಹಬ್ಬದ ಸಂಭ್ರಮಾಚರಣೆ
ಬೆಂಗಳೂರು: ಮಹಾಲಕ್ಷ್ಮೀಲೇಔಟ್ ನಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ ಅವರ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳು, ಸ್ನೇಹಿತರು ಅದ್ದೂರಿಯಾಗಿ ಆಚರಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಎಸ್.ಕೇಶವಮೂರ್ತಿರವರು ಕೇಕ್ ಕತ್ತರಿಸಿ, ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾದ ಚೇತನಾ ಕೇಶವಮೂರ್ತಿ, ನಾಯಕರಾದ ಎಮ್.ಶಿವರಾಜು, ಮಾಜಿ ಪಾಲಿಕೆ ಸದಸ್ಯ ಮೋಹನ್ ಕುಮಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಹೆಚ್.ಎಸ್.ಮಂಜುನಾಥ್ ಗೌಡ, ಸುಧೀಂದ್ರ, ಜನಾರ್ಧನ್ ಕುಮಾರೇಗೌಡ, ಶಂಶೀರ್ ಬೇಗ್, ಪರಿಸರ ರಾಮಕೃಷ್ಣ ಮೊದಲಾದವರು ಭಾಗವಹಿಸಿದ್ದರು.
ಮಹಾಲಕ್ಷ್ಮಿಪುರಂ ವಾರ್ಡ್ ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿರವರು ಕೆ.ಎಲ್.ಇ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪರ ಹೋರಾಟದ ಮೂಲಕ ಸಾಮಾಜಿಕ ಸೇವೆಗೆ ಮುನ್ನುಡಿ ಬರೆದರು.
ಡೊನೇಷನ್ ಹಾವಳಿ ಮತ್ತು ಬಸ್ ಪಾಸ್ ಸಮಸ್ಯೆ ಕುರಿತು ಅಂದು ಸಾವಿರಾರು ವಿದ್ಯಾರ್ಥಿಗಳ ಜೊತೆಗೂಡಿ ಡೊಡ್ಡ ಹೋರಾಟ ಮಾಡಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳಾದ ಆರ್.ಗುಂಡೂರಾವ್ ಅವರ ನಿಕಟ ಸಂಪರ್ಕ ಲಭಿಸಿತು.
ಕೆ.ಎಲ್.ಇ.ಕಾಲೇಜು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿ ಉತ್ತಮ ಸೇವೆ ಮಾಡಿದ ಪ್ರತಿಫಲ ವಿದ್ಯಾರ್ಥಿ ನಾಯಕರಾಗಿ ಎಸ್.ಕೇಶವಮೂರ್ತಿರವರು ಬೆಳೆದರು.
ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಳೆದ 40 ವರ್ಷಗಳಿಂದ ಉತ್ತಮ ಒಡನಾಟವಿದೆ.
ಕಾಂಗ್ರೆಸ್ ಪಕ್ಷದಲ್ಲಿ ಯುವ ಕಾಂಗ್ರೆಸ್ , ಜಿಲ್ಲಾ ಕಾಂಗ್ರೆಸ್ ವಿಭಾಗದಲ್ಲಿ ವಿವಿಧ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹೈಕಮಾಂಡ್ ಇವರ ಹೋರಾಟವನ್ನು ಗಮನಿಸಿ ಬಿಬಿಎಂಪಿ ಚುನಾವಣೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿತು.
ಎಸ್.ಕೇಶವಮೂರ್ತಿ ಅವರು ಮಹಾಲಕ್ಷ್ಮಿಪುರಂ ವಾರ್ಡ್ನಲ್ಲಿ ಮೊದಲನೇ ಬಾರಿಗೆ ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾದರು. ನಂತರ ಐದು ವರ್ಷಗಳ ಜನಪರ ಕೆಲಸ ಮೆಚ್ಚಿದ ಜನರು ಎರಡನೇ ಬಾರಿಗೆ ಅತ್ಯಧಿಕ ಮತಗಳಿಂದ ಆಯ್ಕೆಯಾದರು. ಎಸ್.ಕೇಶವಮೂರ್ತಿರವರು 10 ವರ್ಷ ಮಹಾನಗರ ಪಾಲಿಕೆ ಸದಸ್ಯರಾಗಿ ಜನಪರ ಕಾರ್ಯಗಳನ್ನು ಮಾಡಿದ್ದಾರೆ.
ಉತ್ತಮ ರಸ್ತೆಗಳು, ಶುದ್ದ ಕುಡಿಯುವ ನೀರಿನ ಘಟಕ ಮತ್ತು ಉತ್ತಮ ಪಾರ್ಕ್ ಗಳು ಜನರಿಗೆ ಒದಗಿಸಿ ಉತ್ತಮ ಜನಪ್ರತಿನಿಧಿ ಎಂದು ಹೆಸರು ಗಳಿಸಿದರು.









