ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಚಿಗುರು ಕಲಾ ತಂಡ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಐದು ಗ್ಯಾರಂಟಿ ಯೋಜನೆ ಹಾಗೂ ವಿವಿಧ ಯೋಜನೆಗಳ ಕುರಿತು ಸಂಡೂರು ತಾಲ್ಲೂಕಿನ ಹೊಸ ದರೋಜಿ ಗ್ರಾಮದಲ್ಲಿ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು.
- ಅಮೆರಿಕದಿಂದ 1 ಲಕ್ಷ ಕೋಟಿ ರೂ. ವಾಪಸ್ ಪಡೆಯುವುದಾಗಿ ಮೋದಿ ಶಪಥ ಮಾಡಿದ್ದಾರೆಯೇ?
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
ದರೋಜಿ ಗ್ರಾಪಂ ಅಧ್ಯಕ್ಷೆ ಕೆ.ಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜನ ಸಾಮಾನ್ಯರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆನೀಡಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಿದ್ದಲಿಂಗಪ್ಪ ಮಾತನಾಡಿ, ಸರ್ಕಾರದಿಂದ ಜನಸಾಮಾನ್ಯರಿಗೆ ದೊರೆಯುವ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜನೋಸ್ತಮದಿಂದ ಸೇರಿದ್ದು ವಿಶೇಷವಾಗಿದ್ದು, ಬೀದಿ ನಾಟಕ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಮೆಚ್ಚುಗೆ ಸಂದಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಮಾಯಣ್ಣ, ಕೊಟ್ರಮ್ಮ, ಗ್ರಾಮದ ಹಿರಿಯರು, ಚಿಗುರು ತಂಡದ ಕಲಾವಿದರಾದ ಹುಲುಗಪ್ಪ ಎಸ್.ಎಂ., ಎಚ್.ರಮೇಶ, ಬಿ.ಆನಂದ, ಹೆಚ್.ಎರಿಸ್ವಾಮಿ, ಎಂ.ನವೀನ್, ವೈ.ತಾಯಪ್ಪ, ಎಚ್.ಗಂಗಮ್ಮ, ವೈ.ರುತಮ್ಮ ಸೇರಿದಂತೆ ಸಾರ್ವಜನಿಕರು ಇದ್ದರು.



