ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಪ್ರಕರಣದಲ್ಲಿ ಪೊಲೀಸರ ವಾದವನ್ನು ಕೇಳದೆ ಹೈಕೋರ್ಟ್ ನಲ್ಲಿ ತೀರ್ಪು ನೀಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಬೇರೆ ರೀತಿಯ ಮಾಹಿತಿಗಳನ್ನು ಕೇಳುವ ಸಂದರ್ಭದಲ್ಲಿ ಸರ್ಕಾರದ ಪರವಾದ ವಾದ ಕೇಳದೆ ತೀರ್ಪು ಪ್ರಕಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ ಅದರ ಸತ್ಯಾಸತ್ಯತೆಗಳ ಬಗ್ಗೆ ತಾವು ಹೇಳಿಕೆ ನೀಡಲು ಬಯಸುವುದಿಲ್ಲ ಎಂದರು.
ವಿಧಾನಪರಿಷತ್ ವ್ಯಾಪ್ತಿಯಲ್ಲಿ ನಡೆಯುವ ಪ್ರಕರಣಗಳು ಸಭಾಪತಿಯವರ ವ್ಯಾಪ್ತಿಗೊಳಪಡುತ್ತವೆ. ಪೊಲೀಸ್ ಠಾಣೆ ಮೆಟ್ಟಿಲೇರುವ ಅಗತ್ಯವಿಲ್ಲ ಎಂಬ ವಾದಗಳಿವೆ. ಆದರೆ ಅಧಿವೇಶನ ಮುಂದೂಡಿಕೆಯಾಗಿದ್ದ ಸಂದರ್ಭದಲ್ಲಿ ಕೃತ್ಯ ನಡೆದಿದೆ. ಹೀಗಾಗಿ ಇದು ಸಭಾಪತಿ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬ ವಿಶ್ಲೇಷಣೆಯೂ ಇದೆ. ಇನ್ನೂ ಕೆಲವರು ಸದನ ಚಾಲ್ತಿಯಲ್ಲಿತ್ತು. ಹೀಗಾಗಿ ಸಭಾಪತಿಯವರೇ ಇತ್ಯರ್ಥ ಮಾಡಬೇಕಿತ್ತು ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದರು.
ಸಿ.ಟಿ.ರವಿಯವರನ್ನು ಬಂಧಿಸಿದ ಬಳಿಕ ಇಡೀರಾತ್ರಿ ಬೇರೆಕಡೆಯಲ್ಲೆಲ್ಲಾ ಸುತ್ತಾಡಿಸಲಾಗಿದೆ ಎಂಬ ವಿಚಾರ ನನಗೆ ಮಾಹಿತಿ ಇಲ್ಲ. ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ನನ್ನನ್ನು ಕೊಲೆ ಮಾಡಲು ಯತ್ನಿಸಲಾಗಿದೆ ಎಂದು ಸಿ.ಟಿ.ರವಿ ಹೇಳಿರುವ ಕುರಿತು ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
ಸಿ.ಟಿ.ರವಿ ವಿರುದ್ಧ ದಾಳಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಮಂದಿಯನ್ನು ಬಂಧಿಸಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಮಾಡಿರುವ ಕುರಿತು ಸಿ.ಟಿ.ರವಿ ಪ್ರಶ್ನೆ ಮಾಡುತ್ತಿದ್ದಾರೆ. ಅವರು ಎಲ್ಲದಕ್ಕೂ ಆರೋಪ ಮಾಡುತ್ತಾರೆ ಎಂದರು.
ಜಾಮೀನನ್ನು ರದ್ದುಗೊಳಿಸಿ ತನಿಖೆ ಮುಂದುವರೆಸಲು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಚರ್ಚೆ ನಡೆಸಿದ್ದೇವೆ. ಲೆಕ್ಕಾ ಚುಕ್ತಾ ಮಾಡುತ್ತೇವೆ ಎಂದು ಸಿ.ಟಿ.ರವಿ ಹೇಳಿರುವುದಕ್ಕೆ ಚುಕ್ತವಾಗಬಹುದು ಎಂದರು.
ಗೃಹ ಇಲಾಖೆಯಲ್ಲಿ ಅನ್ಯರ ಹಸ್ತಕ್ಷೇಪ ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಗಿಂತಲೂ ಉನ್ನತ ಸ್ಥಾನದಲ್ಲಿದ್ದಾರೆ. ಅವರನ್ನು ಹೊರತುಪಡಿಸಿ ಬೇರೆ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಇಲಾಖೆಯ ನಿರ್ವಹಣೆಗೆ ನನಗೆ ಸಂಪೂರ್ಣ ಸ್ವಾತಂತ್ರ್ಯ ಇದೆ. ಇದರಲ್ಲಿ ಯಾವುದೇ ತಗಾದೆಗಳಿಲ್ಲ ಎಂದರು.




