ಬೆಂಗಳೂರು: ಭಾರತೀಯ ಕ್ರಿಕೆಟ್ ನಲ್ಲಿ ಭರ್ಜರಿ ಹೊಡೆತಗಳ ಮೂಲಕ ಗಮನ ಸೆಳೆದ ಕ್ರಿಕೆಟಿಗ ಕೊಡಗಿನ ಕುವರ ರಾಬಿನ್ ಉತ್ತಪ್ಪ ಆಟದ ಮೈದಾನದಲ್ಲಿ ಸುದ್ದಿ ಮಾಡಿದ್ದಕ್ಕಿಂತ ಹೆಚ್ಚು ಹೊರಗಡೆ ಸದ್ದು ಮಾಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದಾಂಪತ್ಯ ಜೀವನದಿಂದ ಹಿಡಿದು ಹಲವಾರು ಕಾರಣಗಳಿಂದ ಸುದ್ದಿ ಮಾಡಿದ ಈ ಮಾಜಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಇದೀಗ ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಎದುರಿಸುತ್ತಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ ನಂತರ ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಕಂಪನಿಯನ್ನು ನಡೆಸುತ್ತಿದ್ದಾರೆ. ಈ ಕಂಪನಿಯಲ್ಲಿ ಸಾಕಷ್ಟು ಮಂದಿ ಉದ್ಯೋಗಿಗಳಿದ್ದಾರೆ. ಅವರಿಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತಿತ್ತು. ಅಲ್ಲದೇ ಅವರ ಸಂಬಳದಿಂದ ಪಿಎಫ್ ಹಣವನ್ನು ತಿಂಗಳು ತಿಂಗಳು ಕಡಿತ ಮಾಡಲಾಗುತ್ತಿತ್ತು. ಆದರೆ ಈ ಹಣವನ್ನು ಉದ್ಯೋಗಿಗಳ ಖಾತೆಗೆ ಹಾಕುತ್ತಿಲ್ಲ. ಹಣ ಪಾವತಿಸುವಂತೆ ಪಿ ಎಫ್ ಅಧಿಕಾರಿಗಳು ಸಂಸ್ಥೆಗೆ ಪತ್ರ ಬರೆದರೂ ಯಾವುದೇ ಉತ್ತರ ನೀಡಿಲ್ಲ.

ಪಿಎಫ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ದಾಖಲೆ ಪತ್ರಗಳನ್ನು ಅವಲೋಕಿಸಿದ್ದಾರೆ. ಈ ವೇಳೆ ರಾಬಿನ್ ಉತ್ತಪ್ಪ ತಮ್ಮ ಕಂಪನಿಯಲ್ಲಿ ಕೆಲಸ ಮಾಡುವ ನೌಕರರ ಪಿಎಫ್ ವಂತಿಗೆ ಹಣವನ್ನು ಪಾವತಿಸದೆ ಸುಮಾರು 23 ಲಕ್ಷ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರದ ಪೊಲೀಸರಿಗೆ ಪಿಎಫ್ಓ ಅಧಿಕಾರಿ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪತ್ರ ಬರೆದಿದ್ದಾರೆ. ಹೀಗಾಗಿ ಪೊಲೀಸರು ರಾಬಿನ್ ಉತ್ತಪ್ಪರ ವಿಳಾಸ ಹುಡುಕಿಕೊಂಡು ಹೋಗಿದ್ದರು. ಆದರೆ ಆ ವಿಳಾಸದಲ್ಲಿ ಉತ್ತಪ್ಪ ವಾಸವಿಲ್ಲದಿರುವುದು ಗೊತ್ತಾಗಿ ಪೊಲೀಸರು ವಾಪಸ್ ಆಗಿದ್ದು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಬಿನ್ ಉತ್ತಪ್ಪ, ತಮಗೂ ಕಂಪನಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.




