ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹಂಚಿಕೆ, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ಜೊತೆಗೆ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ಕನಸಿನ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ಹಣಕಾಸು ಸಚಿವರಾಗಿ ದಾಖಲೆ ಬಜೆಟ್ ಗಳನ್ನು ಮಂಡಿಸಿರುವ ಅವರು ಇದೀಗ ಮಾರ್ಚ್ 14ರಂದು ಮತ್ತೊಂದು ಬಜೆಟ್ ಮಂಡಿಸಲಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬರುವ ಫೆಬ್ರವರಿ ಒಂದರಂದು ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಅದನ್ನು ನೋಡಿಕೊಂಡು ಸಿದ್ದರಾಮಯ್ಯ ಮಾರ್ಚ್ 14ರಂದು ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶ ಮಾರ್ಚ್ 10 ರಿಂದ ಆರಂಭವಾಗಲಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ತೆಗೆದಿರಿಸಬೇಕಾದ ಒತ್ತಡಕ್ಕೆ ಸಿಲುಕಿರುವ ಸಿದ್ಧರಾಮಯ್ಯ ಈ ಬಾರಿ 4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಆದಷ್ಟು ಶೀಘ್ರ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸಲು ನಿರ್ಧರಿಸಿದ್ದು, ಸೋಮವಾರದಿಂದ ಇಲಾಖಾವಾರು ಪ್ರಗತಿಪರಿಶೀಲನೆ ನಡೆಸಲಿದ್ದಾರೆ.




