ಬೆಳಗಾವಿ: “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗದಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳ, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಎಚ್.ಕೆ ಪಾಟೀಲ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ವೀರಪ್ಪ ಮೊಯ್ಲಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್(ರಾಜು)ಸೇಠ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ , ಮಹಾನಗರ ಪಾಲಿಕೆ ಆಯುಕ್ತರಾದ ಶುಭಾ. ಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಜಂಟಿ ನಿರ್ದೇಶಕ ಕೆ ಎಚ್ ಚನ್ನೂರು, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಜರಿದ್ದರು.




