ಧಾರವಾಡ: ಧಾರವಾಡ ನಗರದ ಅನುದಾನಿತ ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಿಂದಕ್ಕೆ ಪಡೆದು, ಆದೇಶ ಹೋರಡಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ಮಕ್ಕಳು ಪ್ರವೇಶ ಪಡೆಯದಂತೆ ಹಾಗೂ ಈಗಿರುವ ಮಕ್ಕಳು ಬೇರೆ ಕಡೆಗೆ ಪ್ರವೇಶ ಪಡೆಯಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ.
ಒಂದು ವೇಳೆ ಈ ಶಾಲೆಯಲ್ಲಿ ಪ್ರವೇಶ ಪಡೆದಲ್ಲಿ ಅಥವಾ ಮಕ್ಕಳಿಗೆ ಅಲ್ಲಿಯೇ ಶಿಕ್ಷಣ ಮುಂದುವರಿಸಿದಲ್ಲಿ ಇಲಾಖೆಯು ಮುಂದಿನ ಆಗುಹೋಗುಗಳಿಗೆ ಜವಾಬ್ದದಾರಿಯಾಗಿರುವುದಿಲ್ಲ. ಸಂಬಂಧಪಟ್ಟ ಪಾಲಕರೇ ಜವಾಬ್ದಾರರು ಎಂದು ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



