ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ನಾಯಕತ್ವ ಗುಣವನ್ನು ರೂಢಿಸಿಕೊಳ್ಳಿ: ಲಿಂಗರಾಜ ಎ.ಬೆಲ್ಲದ

1 year ago

ಧಾರವಾಡ: ವಿದ್ಯಾರ್ಥಿಗಳು ಜೀವನದಲ್ಲಿ ಕೌಶಲ್ಯ, ಆತ್ಮವಿಶ್ವಾಸ ಮತ್ತು ಉತ್ತಮ ನಾಯಕತ್ವದ ಗುಣವನ್ನು ರೂಡಿಸಿಕೊಳ್ಳಬೇಕು ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಲಿಂಗರಾಜ ಎ. ಬೆಲ್ಲದ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಕೋಶ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಎನ್.ಎಸ್.ಎಸ್. ಬಾಲಕ ಮತ್ತು ಬಾಲಕಿಯರ ನಾಯಕತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತ ವಿಷಯಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸುತ್ತಮುತ್ತಲಿನ ಜನರಿಗೂ ತಿಳಿಸಿಕೊಡಬೇಕು. ನಾಯಕತ್ವದ ಗುಣವನ್ನು ಹೊಂದಿರುವ ವ್ಯಕ್ತಿ ಉತ್ತಮವಾದ ರಂಗದಲ್ಲಿ ಗುರುತಿಸಿಕೊಳ್ಳುತ್ತಾರೆ ಎಂದರು.

ಬೆಳಗಾವಿ ವಿಭಾಗ ಮಟ್ಟದ ಎನ್.ಎಸ್.ಎಸ್. ಬಾಲಕ ಮತ್ತು ಬಾಲಕಿಯರ ನಾಯಕತ್ವ ತರಬೇತಿ ಶಿಬಿರದಲ್ಲಿ ವಿಜಯಪುರ, ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ಹಾಗೂ ಹಾವೇರಿ ಸೇರಿ ಒಟ್ಟು 8 ಜಿಲ್ಲೆಯ 300 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಸುಷ್ಮಾ ಮಳಿಮಠ, ಶ್ರೀ ಹಿರೇಮಲ್ಲೂರ ಈಶ್ವರನ್ ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಶಶಿಧರ ತೋಡಕರ, ಸೃಷ್ಟಿ ಪಿಯು ಕಾಲೇಜಿನ ಪ್ರಾಚಾರ್ಯ ರವಿ ಕೆಮ್ಮನ್ನವರ, ಬೆಳಗಾವಿ ವಿಭಾಗೀಯ ಎನ್.ಎಸ್.ಎಸ್. ಅಧಿಕಾರಿ ರವಿಕುಮಾರ ಅಂಬೋರೆ, ಹಾಗೂ ವಿಜಯಪುರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಭಾಗೀಯ ಅಧಿಕಾರಿ ಎಮ್.ಎಸ್.ಮುಲ್ಲಾ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಧಾರವಾಡ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ರಾಜಕುಮಾರ ಎಸ್. ಭಜಂತ್ರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯರ್ಥಿಗಳಿಗೆ ಪ್ರಶಸ್ತಿ, ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ಸಹಾಯಕ ಶಿಬಿರಾಧಿಕಾರಿ ಆರ್.ಬಿ.ಚವ್ಹಾಣ, ಹಾಗೂ ಶ್ರೀ ಸಾಯಿ ಪಿಯು ಕಲೇಜಿನ ಪ್ರಾಚಾರ್ಯ ನಾಗರಾಜ ಶಿರೂರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ವಿವಿಧ ಜಿಲ್ಲೆಯ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೆಲಸಗಳನ್ನು ಜವಾಬ್ದಾರಿಯಿಂದ ನಿಭಾಯಿಸುವ ಗುಣ ಮತ್ತು ಮತ್ತೊಬ್ಬರ ಮೇಲೆ ಅವಲಂಬನೆ ಆಗದೆ ಸ್ವಯಂ ಪ್ರೇರಿತವಾಗಿ ಮುನ್ನಡೆಯುವ ಮನೋಭಾವದ ಜೊತೆಗೆ ಶಿಸ್ತು, ಸಮಯಪ್ರಜ್ಞೆ, ಕ್ರಿಯಾಶೀಲತೆ, ನಾಯಕತ್ವದ ಗುಣ, ಮತ್ತು ಕೆಲವು ಮೌಲ್ಯಯುತವಾದ ನಂಬಿಕೆ, ಆತ್ಮವಿಶ್ವಾಸ, ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಮನೋಭಾವವನ್ನು ಈ ಶಬಿರದಿಂದ ತಿಳಿದುಕೊಂಡಿದ್ದೇನೆ ಎಂದು ಶಿಬಿರದಲ್ಲಿ ಭಾಗವಹಿಸಿದ್ದ ಬಾಗಲಕೋಟ ಜಿಲ್ಲೆಯ ವಿದ್ಯಾರ್ಥಿನಿ ಅನ್ನಪೂರ್ಣ ಜಾಡರ್ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply