ಬೆಂಗಳೂರು: ಅತ್ತ ಡಿಸಿಎಂ @DKShivakumar ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ @siddaramaiah ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಹೇಳಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಬಣದ ಶಾಸಕರು ಮತ್ತು ಸಚಿವರು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಔತಣ ಕೂಟದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಆರ್ ಅಶೋಕ್, ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರಚೋದಿಸಿದ್ದಾರೆ.
ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದಿದ್ದಾರೆ.



