ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

1 year ago

ಧಾರವಾಡ: 2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಅರ್ಹ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 15, 2025 ವರೆಗೆ ವಿಸ್ತರಿಸಲಾಗಿದೆ. ಆಸಕ್ತರು https://bcwd.karnataka.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770004 ಗೆ ಸಂಪರ್ಕಿಸಬಹುದು.

Leave a Reply