ಬೆಂಗಳೂರು: ತಮ್ಮ ನಾಯಕತ್ವ ಕುರಿತು ಹಲವರು ಅಪಸ್ವರ ಎತ್ತಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷ ಸಂಘಟನೆ ಹೆಸರಲ್ಲಿ ಪ್ರಮುಖ ನಾಯಕರ ಸಭೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿ ಒಗ್ಗಟ್ಟಿನ ಸಂದೇಶ ರವಾನಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮತ್ತು ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಮಾಜಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಕರೆದಿದ್ದರು.
ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಸದಾನಂದ ಗೌಡ ನೇತೃತ್ವದಲ್ಲಿ ನಡೆದ ಈ ಸಭೆಗೆ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ ಅವರು ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.
ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ. ಹಲವು ಇಲಾಖೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದಿವೆ. ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳನ್ನು ನಿಭಾಯಿಸಲು ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಸರಣಿ ಹೋರಾಟಗಳನ್ನು ಸಂಘಟಿಸಲು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.
ನಂತರ ಮಾತನಾಡಿದ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ರೇಣುಕಾಚಾರ್ಯ ರಾಜ್ಯ ಬಿಜೆಪಿಯಲ್ಲಿ ಕೆಲವು ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದಕ್ಕೆ ಹೈಕಮಾಂಡ್ ತಕ್ಕ ಉತ್ತರ ನೀಡಬೇಕು ಎಂದರು.
ಪಕ್ಷದ ಅಧ್ಯಕ್ಷರನ್ನಾಗಿ ವಿಜಯೇಂದ್ರ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಅವರ ನಾಯಕತ್ವದಲ್ಲಿ ಎಲ್ಲಾ ಹೋರಾಟಗಳು ನಡೆಯಬೇಕು ಮತ್ತು ಪಕ್ಷ ಸಂಘಟನೆ ಆಗಬೇಕು. ಮುಂಬರುವ ವಿಧಾನಸಭೆ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸಬೇಕು ಎಂಬ ನಿರ್ಣಯವನ್ನು ಈ ಸಭೆ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಇದು ಶಕ್ತಿಪ್ರದರ್ಶನದ ಸಭೆ ಅಲ್ಲ ಹಾಗೂ ಪಕ್ಷದ ಯಾವುದೇ ನಾಯಕರ ವಿರುದ್ಧವು ಅಲ್ಲ ಎಂದು ಸ್ಪಷ್ಟೀಕರಣ ನೀಡಿದರು.
ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಮತ ಮತ್ತು ಗೊಂದಲ ಇಲ್ಲ. ಕೆಲವು ಸಣ್ಣಪುಟ್ಟ ಅಭಿಪ್ರಾಯ ಭೇದಗಳಿದ್ದು ಅದನ್ನು ಒಟ್ಟಾಗಿ ಕುಳಿತು ಬಗೆಹರಿಸಿಕೊಳ್ಳುತ್ತೇವೆ ಎಂದರು.
ಇಂದಿನ ಸಭೆಯಲ್ಲಿ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಸರಣಿ ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದೇವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸುವ ಕುರಿತಂತೆ ಸಮಾಲೋಚನೆ ನಡೆಸಿದ್ದೇವೆ ಎಂದರು.
ಸರ್ಕಾರದಲ್ಲಿ ನಾಯಕತ್ವದ ಬಗ್ಗೆ ಬಡಿದಾಟ ಶುರುವಾಗಿದೆ. ಅಧಿಕಾರ ಹಂಚಿಕೆಯ ಸೂತ್ರದಂತೆ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಆದರೆ ಅದಕ್ಕೆ ಸಿದ್ಧವಿಲ್ಲದ ಅವರು ತಮ್ಮ ಬೆಂಬಲಿಗ ಮಂತ್ರಗಳ ಮೂಲಕ ಡಿನ್ನರ್ ಪಾಲಿಟಿಕ್ಸ್ ಆರಂಭಿಸಿದ್ದಾರೆ ಎಂದರು.




