ಬೆಂಗಳೂರು: ನಾಯಕತ್ವ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ವಿನಯ್ ಗುರೂಜಿ ಕುತೂಹಲಕರ ಹೇಳಿಕೆ ನೀಡಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಶಿವಕುಮಾರ್ ಅವರಿಗಿರುವ ಗುರು ನಿಷ್ಠೆ ಅವರನ್ನು ಉನ್ನತ ಹುದ್ದೆಗೆ ಕೊಂಡೊಯ್ಯಲ್ಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲಾ ಅವಕಾಶ ಮತ್ತು ಅರ್ಹತೆ ಇದೆ. ಹೀಗಾಗಿ ಸಿದ್ದರಾಮಯ್ಯ ಅವರ ನಂತರ ಆ ಸ್ಥಾನವನ್ನು ಇವರು ಅಲಂಕರಿಸಲಿದ್ದಾರೆ ಎಂದರು.
ಶಿವಕುಮಾರ್ ಅವರ ಗುರು ನಿಷ್ಠೆ ಅಜ್ಜಯ್ಯ ಅವರ ಮೇಲಿನ ಅಪಾರವಾದ ಗೌರವ, ಹಿರಿಯರ ಮೇಲಿರುವ ಭಕ್ತಿ, ನಾಟಕೀಯವಲ್ಲದ ಮಾತು ಮತ್ತು ನಡವಳಿಕೆ ಅವರನ್ನು ಈ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.
ಪಕ್ಷದ ಅಧ್ಯಕ್ಷರಾಗಿ ಅವರು ಎಲ್ಲರನ್ನೂ ಒಟ್ಟುಗೂಡಿಸಿದ ವೈಖರಿ ಸಂಘಟನಾ ಸಾಮರ್ಥ್ಯ ಪಾದಯಾತ್ರೆಯಂತಹ ರಾಜಕೀಯ ತಂತ್ರಗಾರಿಕೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಚಾತುರ್ಯದ ಪರಿಣಾಮವಾಗಿ ಅವರಿಗೆ ಈ ಅವಕಾಶ ಲಭಿಸಲಿದೆ ಎಂದರು.




