ಬಳ್ಳಾರಿ: ಸಾರ್ವಜನಿಕರು ತಮ್ಮ ಮನೆಯ ಹೊರಗಿನ ನೀರು ಸಂಗ್ರಹಕಗಳಿಗೆ ಸರಿಯಾಗಿ ಮುಚ್ಚಳ ಮುಚ್ಚುವ ಮೂಲಕ ಈಡಿಸ್ ಸೊಳ್ಳೆಗಳು ಮೊಟ್ಟೆ ಇಡದಂತೆ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಹೇಳಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗದ ಸಹಕಾರದಲ್ಲಿ ಲಾರ್ವಾ ಸಮೀಕ್ಷಾ ಕಾರ್ಯದ ವಿಶೇಷ ಅಭಿಯಾನದ ಹಿನ್ನೆಲೆಯಲ್ಲಿ ನಗರದ ಕಾಟಿಗುಡ್ಡ ವ್ಯಾಪ್ತಿಯಲ್ಲಿ ಶುಕ್ರವಾರ ಮನೆ ಭೇಟಿ ಸಮಿಕ್ಷಾ ಕಾರ್ಯ ಪರಿಶೀಲಿಸಿ ಮಾತನಾಡಿದರು.
ಡೆಂಗ್ಯು ರೋಗ ಹರಡುವ ಈಡಿಸ್ ಸೊಳ್ಳೆಗಳ ಸಂತತಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಮನೆಯ ಸುತ್ತಲೂ ನೀರು ನಿಲ್ಲದಂತೆ ಸ್ವಚ್ಚವಾಗಿಟ್ಟುಕೊಳ್ಳಬೇಕು. ಈ ಮೂಲಕ ಡೆಂಗ್ಯು ರೋಗ ಹರಡುವ ಈಡಿಸ್ ಇಜಿಪ್ಟೈ ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.
ಡೆಂಗ್ಯು ಪ್ರಕರಣಗಳು ಗಣನೀಯ ನಿಯಂತ್ರಣವಾಗಿದ್ದು, ವಿಶೇಷವಾಗಿ ನೀರು ಸಂಗ್ರಹಕಗಳಾದ ಡ್ರಮ್ ಬ್ಯಾರಲ್, ಕಲ್ಲಿನ ಡೋಣಿ, ಸಿಮೆಂಟ್ ತೊಟ್ಟಿ ಮುಂತಾದವುಗಳನ್ನು ವಾರದಲ್ಲಿ ಒಮ್ಮೆ ಚೆನ್ನಾಗಿ ತಿಕ್ಕಿ ತೊಳೆದು ನೀರು ತುಂಬುವುದಕ್ಕೆ ಆದ್ಯತೆ ನೀಡಬೇಕು ಎಂದರು.
ಸ್ವಚ್ಚಗೊಳಿಸಲು ಸಾಧ್ಯವಿಲ್ಲದ ಪರಿಕರಗಳಿಗೆ ಟೆಮಿಫಾಸ್ ದ್ರಾವಣವನ್ನು ಹಾಕಲು ಸಹಕರಿಸಬೇಕು. ಅಲ್ಲದೆ ಈ ಖಾಯಿಲೆಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿರುವುದರಿಂದ ಜ್ವರ, ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು ಮುಂತಾದವು ಕಂಡು ಬಂದರೆ ತಡ ಮಾಡದೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎನ್ ವಿಬಿಡಿಸಿಪಿ ಜಿಲ್ಲಾ ಸಲಹೆಗಾರರು ಪ್ರತಾಪ್, ಆರೋಗ್ಯ ನಿರೀಕ್ಷಣಾಧಿಕಾರಿ ಶರತ್, ಚೇತನ್, ಪ್ರಾಥಮಿಕ ಅರೋಗ್ಯ ಸಂರಕ್ಷಣಾಧಿಕಾರಿ ಶ್ರೀಲಕ್ಷ್ಮೀ, ಮಲೇರಿಯಾ ಲಿಂಕ್ ವರ್ಕರ್ ಸೋಮಶೇಖರ ಹಾಗೂ ಸಾರ್ವಜನಿಕರು ಹಾಜರಿದ್ದರು.



