ಜಯಕರ್ನಾಟಕ ವತಿಯಿಂದ ಮಹಿಳಾ ದಿನಾಚರಣೆ

4 years ago

ಬೆಂಗಳೂರು: ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಯುವ ಸಂಸ್ಥಾಪಕ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಮಾರ್ಗದರ್ಶನದಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕರೀಸಂದ್ರ ವಾರ್ಡ್ ನ ಶ್ರೀ ಕೃಷ್ಣ ಕನ್ವೆನ್ಷನ್ ಹಾಲ್ ನಲ್ಲಿ ವಿಶ್ವ ಮಹಿಳಾ ದಿನ ಆಚರಿಸಲಾಯಿತು.

ಈ ವೇಳೆ ಆಶಾ ಕಾರ್ಯಕರ್ತಯರು, ಅಂಗನವಾಡಿ ಶಿಕ್ಷಕಿಯರು, ಸರ್ಕಾರಿ ಆಸ್ಪತ್ರೆ ನರ್ಸ್ ಗಳು, ಬಿಬಿಎಂಪಿ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ವಿವಿಧ ಕಲಾ ಮತ್ತು ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ವೇಳೆ ಪಾಲಿಕೆ ಮಾಜಿ ಸದಸ್ಯರಾದ ಯಶೋಧ ಲಕ್ಷೀಕಾಂತ, ಡಾ.ಎ.ಎಚ್.ಬಸವರಾಜ್, ಹಿರಿಯ ವಕೀಲ ಲಕ್ಷ್ಮೀ ಅಯ್ಯಂಗಾರ್, ಚಲನಚಿತ್ರ ನಟಿಯರಾದ ಮೀನಾಕ್ಷಿ ಅನುರಾಧ, ಮೇಘನಾರಾಮ್, ಜಯಕರ್ನಾಟಕ ಜನಪರ ವೇದಿಕೆ ಮಹಾ ಪ್ರಧಾನ ಸಂಚಾಲಕ ಶೇ.ಬೋ.ರಾಧಾಕೃಷ್ಣ, ರಾಜ್ಯ ಉಪಾಧ್ಯಕ್ಷ ಉದಯಶೆಟ್ಟಿ, ಐ ಕೇರ್ ಬ್ರಿಗೇಡ್ ಸಂಸ್ಥೆಯ ಸದಸ್ಯೆ ಶಿಲ್ಪಾಸ್ಪೂರ್ತಿ, ಬೆಂಗಳೂರು ಜಿಲ್ಲೆ ಅಧ್ಯಕ್ಷ ಜೆ.ಶ್ರೀನಿವಾಸ್, ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಮನೋಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply