ಬೀದರ್: ಗಡಿ ಜಿಲ್ಲೆ ಬೀದರ್ ನ ಹೃದಯ ಭಾಗ ಶಿವಾಜಿ ಚೌಕ್ ನಲ್ಲಿ ಹಾಡಹಗಲೇ ಎಟಿಎಂ ಗೆ ಹಣ ತುಂಬಲು ಬಂದ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಹತ್ಯೆಗೈದು ಹಣದೊಂದಿಗೆ ಪರಾರಿಯಾಗಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಶಿವಾಜಿ ಚೌಕದಲ್ಲಿರುವ ಎಸ್ ಬಿ ಐ ಕಚೇರಿ ಮುಂದಿನ ಎಟಿಎಂ ಗೆ ಹಣ ತುಂಬಲು ವಾಹನದಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಹೊಂಚು ಹಾಕಿ ಕಾದು ಕುಳಿತಿದ್ದ ದುಷ್ಕರ್ಮಿಗಳು ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಒಬ್ಬರು ಸ್ಥಳದಲ್ಲೇ ಮೃತ ಪಟ್ಟರೆ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎಟಿಎಂ ಗೆ ಹಣ ತುಂಬಲು ವಾಹನ ಬರುವುದನ್ನು ಖಚಿತಪಡಿಸಿಕೊಂಡು ಕಾದು ಕುಳಿತಿದ್ದ ದುಷ್ಕರ್ಮಿಗಳು ವಾಹನ ಬರುತ್ತಿದ್ದಂತೆ ಮೊದಲಿಗೆ ಬ್ಯಾಂಕ್ ಹಾಗೂ ಎಟಿಎಂಗೆ ಹಣ ಹಾಕುವ ಪಿಎಸ್‌ಸಿ ವಾಹನದ ಮೇಲೆ ದಾಳಿ ಮಾಡಿ, ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಈ ವೇಳೆ ತಮ್ಮನ್ನು ಹಿಡಿಯಲು ಬಂದ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ.
ಬೀದರ್ ನ ಅತ್ಯಂತ ಜನನಿಬಿಡ ಪ್ರದೇಶ ಎಂದು ಗುರುತಿಸಲಾಗುವ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ ಎಟಿಎಂ ವಾಹನದ ಮೇಲೆ ಕಾರದಪುಡಿ ಮತ್ತು ಬಂದೂಕಿನಿಂದ ದಾಳಿ ಮಾಡಿದ ದುಷ್ಕರ್ಮಿಗಳು ಆ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗುತ್ತಿರುವುದನ್ನು ಕಂಡ ಸ್ಥಳೀಯರು ಕಲ್ಲು ತೂರಿ, ದುರ್ಷರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಿಲ್ಲ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್ ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಅಸುನೀಗಿದ್ದಾರೆ. ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬಿಸಿದ್ದಾರೆ. ಬೈಕ್ ನಂಬರ್ ಕಲೆ ಹಾಕುತ್ತಿದ್ದಾರೆ.
ಇಬ್ಬರು ಮುಸುಕುಧಾರಿಗಳು ಸಿಬ್ಬಂದಿ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



