ಬೆಂಗಳೂರು: ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅತ್ಯಂತ ವೇಗವಾಗಿ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಮತ್ತೊಂದು ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಾದಯಾತ್ರೆಯಲ್ಲಿ ತೆರಳುತ್ತಿದ್ದವರಿಗೆ ಅಪ್ಪಳಿಸಿದೆ.
ಶಾಸಕರು ಚಿತ್ರದುರ್ಗದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದರು. ನೆಲಮಂಗಲ ಸಮೀಪ ಪಾದಯಾತ್ರೆ ಮೂಲಕ ಓಂ ಶಕ್ತಿ ಮಾಲಾಧಾರಿಗಳು ಸಾಗುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದೆ ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಶಾಸಕ ವಿರೇಂದ್ರ ಪಪ್ಪಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಗಳುಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಗೆ ಅಗತ್ಯ ಕ್ರಮಕೈಗೊಳ್ಳವುದಾಗಿ ತಿಳಿಸಿದ್ದಾರೆ.




