ಮಂಗಳೂರು: ಗಡಿ ಜಿಲ್ಲೆ, ಬೀದರ್ ನಲ್ಲಿ ನಡೆದ ಎಟಿಎಂ ದರೋಡೆ ಪ್ರಕರಣ ಬೆಚ್ಚಿ ಬೀಳಿಸಿರುವ ಬೆನ್ನಲ್ಲೇ ಮಂಗಳೂರು ಹೊರವಲಯದ ಉಳ್ಳಾಳ ಸಮೀಪ ಬ್ಯಾಂಕ್ ದರೋಡೆ ನಡೆದಿದೆ. ಈ ಪ್ರಕರಣ ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ, ನಗದು ಲೂಟಿ ಮಾಡಿದ್ದಾರೆ.
ದರೋಡೆಕೋರರು ಕೈಯಲ್ಲಿ ಬಂದೂಕು, ತಲವಾರು, ಚಾಕು ಹಿಡಿದಿದ್ದರು. ಈ ವೇಳೆ ಬ್ಯಾಂಕ್ ನಲ್ಲಿ ನಾಲ್ಕೈದು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಸಿಬ್ಬಂದಿಗೆ ಬಂದೂಕು ತೋರಿಸಿ ಲಾಕರ್ ಬಾಗಿಲು ತೆಗೆಸಿದ ದರೋಡೆಕೋರರು ಚಿನ್ನ, ನಗದನ್ನು ಚೀಲದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಕಳವಾದ ಚಿನ್ನಾಭರಣ, ನಗದು ಅಂದಾಜು ₹ 10-12 ಕೋಟಿ ಇರಬಹುದು ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ದರೋಡೆಕೋರರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದರೋಡೆಕೋರರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.
ಬ್ಯಾಂಕ್ ನ ಕೆಳಗಿನ ಮಹಡಿಯಲ್ಲಿರುವ ಬೇಕರಿಯಲ್ಲಿದ್ದ ಕೆಲ ವಿದ್ಯಾರ್ಥಿಗಳು ಸಿಬ್ಬಂದಿ ಕೂಗಿಕೊಳ್ಳುವುದನ್ನು ಕೇಳಿ ಅತ್ತ ಓಡಿದಾಗ, ದರೋಡೆಕೋರರು ಅವರನ್ನು ಬೆದರಿಸಿದ್ದಾರೆ. ವಿದ್ಯಾರ್ಥಿಗಳ ಬಳಿ ಅವರು ಕನ್ನಡದಲ್ಲಿ ಮಾತನಾಡಿದ್ದರೆ, ಬ್ಯಾಂಕ್ ಸಿಬ್ಬಂದಿ ಬಳಿ ಹಿಂದಿಯಲ್ಲಿ ಮಾತನಾಡಿದ್ದಾರೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.




