ಗ್ಯಾರೆಂಟಿ ಯೋಜನೆಗಳು ಸದ್ಬಳಕೆಯಾಗುತ್ತಿದೆ: ಸಚಿವ
ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಸ್ಥಳೀಯ ಶಾಸಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಜರುಗಿತು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮೇಶ್ ಬಾಬು, ಆಹಾರ ಇಲಾಖೆ ಉಪನಿರ್ದೇಶಕಿ ಸೌಮ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕುಟುಂಬ ಇಲಾಖೆ, ಬೆಸ್ಕಾಂ, ಕೆ.ಎಸ್.ಆರ್.ಟಿ.ಸಿ ಮತ್ತು ಬಿಟಿಎಸ್, ಕ್ರೀಡಾ ಮತ್ತು ಯುವ ಜನ ಸಬಲೀಕರಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಇದೇ ವೇಳೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಗಳು ವೇಗವಾಗಿ ಜನರಿಗೆ ತಲುಪಿದೆ. ಯೋಜನೆಯ ಲಾಭ ಎಷ್ಟು ಜನರಿಗೆ ಸದುಪಯೋಗವಾಗುತ್ತಿದೆ ಮತ್ತು ಇದರಲ್ಲಿ ಬಡವರು, ಮಧ್ಯಮವರ್ಗದವರು ಎಷ್ಟು ಜನರು ಇದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದರು.
ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಯೋಜನೆಯ ಲಾಭ ಸಾವಿರಾರು ಕುಟುಂಬಗಳಿಗೆ ತಲುಪಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಸ್ಲಂ ಪ್ರದೇಶಗಳಲ್ಲಿ ಗೃಹಜ್ಯೋತಿ ಯೋಜನೆ ಬಳಕೆದಾರರು ಶೇಕಡ 90%ರಷ್ಟು ಇದ್ದಾರೆ ಎಂದರು.
ಆಹಾರ ಇಲಾಖೆಯಿಂದ ಬಡವರ ಮನೆಗಳಿಗೆ ಖುದ್ದಾಗಿ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ನೀಡಲಾಗುತ್ತಿದೆ. ಇದರಿಂದ ದುರುಪಯೋಗ ಕಡಿಮೆಯಾಗುತ್ತಿದೆ. ಹಸಿವಿನಿಂದ ಯಾರೂ ಮಲಗಬಾರದು ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಬಡವರ ಪಾಲಿಗೆ ಅಕ್ಷಯಪಾತ್ರೆಯಾಗಿದೆ ಎಂದರು.
ಯುವತಿಯರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮಿ ಯೋಜನೆಯಿಂದ ಸ್ವಾವಲಂಬಿ ಬದುಕು ಸಾಗಿಸಲು ಅನುಕೂಲವಾಗಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು, ಸಮಿತಿಯ ಸದಸ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಹೊಸ ಫಲಾನುಭವಿಗಳನ್ನು ಗುರುತಿಸಿ ಯೋಜನೆ ಲಾಭ ತಲುಪುವಂತೆ ಮತ್ತು ಫಲಾನುಭವಿಗಳಿಗೆ ಸರಿಯಾಗಿ ಯೋಜನೆ ಲಾಭ ತಲುಪುತ್ತಿದೆಯೇ ಎಂದು ಪರಿಶೀಲನೆ ಮಾಡಲಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಶ್ರೀನಿವಾಸಮೂರ್ತಿ, ಸರವಣನ್, ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಓಂಪ್ರಕಾಶ್, ಭಾಗಲಕ್ಷ್ಮಿ, ಅಮರ್ ನಾಥ್ ವಿ, ಮತ್ತು ಕುಮಾರಿ, ಮಾಧುರಿ, ಸೈಯದ್, ಸಲಾವುದ್ದೀನ್, ಮಹೇಶ್ ಜಿ, ದೀಪ, ರೇಖಾ, ಶೇಖರ್, ದರ್ಶನ್ ನಟರಾಜ್, ಮಹೇಶ್ವರಿ ಮೊದಲಾದವರು ಹಾಜರಿದ್ದರು.




