ಧಾರವಾಡ: ಭಾರತೀಯರಿಗೆ ಕೃಷಿ ಮೂಲ ಉದ್ಯೋಗವಾಗಿದೆ. ದೇಶದ ಅಭಿವೃದ್ಧಿಗೆ ಇದು ಪೂರಕವಾಗಿದೆ. ಪ್ರತಿ ಕ್ಷೇತ್ರದಲ್ಲಿ ಸ್ಪರ್ಧೆ ಇರುವಂತೆ ಕೃಷಿಯಲ್ಲಿಯೂ ಸ್ಪರ್ಧೆ ಏರ್ಪಟ್ಟಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮಹಾವಿದ್ಯಾಲಯ ಅಮೃತ ಮಹೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿಯಲ್ಲಿ ಆಧುನಿಕ ಪದ್ಧತಿಗಳನ್ನು ಅಳವಡಿಸಿ, ಆದಾಯ ಹೆಚ್ಚಿಸಲು ಕ್ರಮವಹಿಸಬೇಕು. ರೈತರಿಗೆ ಹೆಚ್ಚು ಲಾಭ ಮತ್ತು ಉಪಯುಕ್ತವಾಗುವ ಕೃಷಿ ಸಂಶೋಧನೆಗಳನ್ನು ತಜ್ಞರು, ವಿಜ್ಞಾನಿಗಳು, ವಿದ್ಯಾರ್ಥಿಗಳು ಮಾಡಬೇಕು ಎಂದರು.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಜನಸಾಮಾನ್ಯರ ಅದರಲ್ಲೂ ಸಾಮಾನ್ಯ ರೈತರ ವಿಶ್ವವಿದ್ಯಾಲಯವಾಗಿದೆ. ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದೆ. ಕೃಷಿ ಮಹಾವಿದ್ಯಾಲಯಕ್ಕೆ 75 ವರ್ಷ ಪೂರ್ಣಗೊಂಡು, ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಕೇಂದ್ರ ಸರಕಾರದಿಂದ ಹವಾಮಾನ ಸಂಶೋಧನ ಕೇಂದ್ರ ಸ್ಥಾಪಿಸಲು ಅನುಮತಿ ದೊರೆತಿದ್ದು, ಇದು ಸುಮಾರು 175 ಕಿ.ಮೀ. ವ್ಯಾಪ್ತಿಯಲ್ಲಿ ಇರುವ ನಿಖರವಾದ ಹವಾಮಾನ ವರದಿಯನ್ನು ನೀಡುತ್ತದೆ. ರೈತರಿಗೆ ಇದರಿಂದ ತುಂಬಾ ಅನುಕೂಲವಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಕೃಷಿ ವಲಯಕ್ಕೆ ಆದ್ಯತೆ ನೀಡಿದ್ದು, ಪ್ರಸಕ್ತ ವರ್ಷ ಕೇಂದ್ರ ಬಜೆಟ್ದ ಲ್ಲಿ 127 ಸಾವಿರ ಕೋಟಿ ರೂ.ಗಳ ಹಣ ಪೂರೈಸಿದೆ. ಸಕ್ಕರೆ ಉತ್ಪಾದನೆ, ತೈಲ ಉತ್ಪಾದನೆ ಮತ್ತು ನವೀಕರಿಸಬಹುದಾದ ಇಂಧನಗಳ ಹೆಚ್ಚಳಕ್ಕೆ ಅಗತ್ಯವಿರುವ ಕಚ್ಚಾವಸ್ತುಗಳ ಉತ್ಪಾದನೆ, ಸಂಸ್ಕರಣೆ ಪೂರಕವಾದ ಯೋಜನೆ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಜಾರಿಗೊಳಿಸಲಾಗಿದೆ ಎಂದರು.
ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್, ಡಾ. ಸುದೇಶ ಜಗದೀಪ ಧನಕರ್ ಅವರು ವೇದಿಕೆಯಲ್ಲಿದ್ದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಲ್. ಪಾಟೀಲ ಅವರು ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಬಸವರಾಜ ಕುಂದಗೋಳಮಠ, ರವಿಕುಮಾರ ಮಾಳಿಗೇರ, ಪಾರ್ವತಿ ಕುರ್ಲೆ, ಶ್ರೀನಿವಾಸ ಕೋಟ್ಯಾನ್ ಸೇರಿದಂತೆ ಇತರ ಸದಸ್ಯರು, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು, ಕೃಷಿ ವಿವಿ ವಿಶ್ರಾಂತ ಕುಲಪತಿಗಳು, ಪ್ರಾಧ್ಯಾಪಕರು, ಅಧಿಕಾರಿಗಳು, ಹಳೆಯ ವಿದ್ಯಾರ್ಥಿಗಳು ಸಮಾರಂಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.




