ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಸರ್ಕಾರ ಒಂದು ಕಡೆ ಮಹಿಳೆಯರಿಗೆ ಕಾರ್ಯಕ್ರಮ ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವಂತಹ ಮೈಕ್ರೊ ಫೈನಾನ್ಸ್ ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದರು.
ಹಿಂದೆ ಎಚ್.ಡಿ.ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಹೆಚ್ಚು ಬಡ್ಡಿ ವಸೂಲಿ ಮಾಡುವವರ ನಿಯಂತ್ರಣಕ್ಕೆ ಕಾನೂನು ತಂದಿದ್ದರು. ಅದು ಕೋರ್ಟ್ ನಲ್ಲಿ ಸ್ಟೇ ಆಗಿದೆ. ಈ ಸರ್ಕಾರ ಕೂಡಲೇ ಅದನ್ನು ತೆರವುಗೊಳಿಸಿ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರ ಪಡೆದು, ಮೈಕ್ರೊ ಫೈನಾನ್ಸ್ ಗಳನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.




