ಬೆಳಗಾವಿ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಾಖ್ಯಾನಿಸಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಬಜೆಟ್ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದಿದ್ದಾರೆ.


