ಬೆಂಗಳೂರು: ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ನಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂತಹದ್ದು ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕೇಂದ್ರ ಬಜೆಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು, ಎಸ್‌ಎಂಇ, ಎಂಎಸ್‌ಎಂಇ, ನವೋದ್ಯಮಿಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದರು.
ಆದಾಯ ತೆರಿಗೆ ಸ್ಲ್ಯಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಜಿಎಸ್‌ಟಿ ಬಗ್ಗೆ, ಆದಾಯ ತೆರಿಗೆ ಬಗ್ಗೆಯೂ ಹೀಗೆ ಮಾತನಾಡಿದ್ದರು. ಈವರೆಗೂ ಅವರು ಟ್ಯಾಕ್ಸೇಷನ್ ಪದ್ಧತಿಯನ್ನು ಸರಿಯಾಗಿ ಅಳವಡಿಸಿಕೊಂಡಿಲ್ಲ ಎಂದರು.
ಕೇಂದ್ರದ ಯಾವ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿದೆ? ಸ್ಟಾರ್ಟ್‌ಅಪ್ ಇಂಡಿಯಾ ಯೋಜನೆಯಲ್ಲಿ 9 ವರ್ಷದ ಹಿಂದೆ ₹20 ಸಾವಿರ ಘೋಷಣೆ ಮಾಡಿ ಈವರೆಗೂ ಕೊಟ್ಟಿದ್ದು ₹454 ಕೋಟಿ ರೂ. ಅಷ್ಟೆ. ಅವರು ಅಲಂಕಾರಿಕ ಪದಗಳನ್ನು ಬಳಸಿ ಘೋಷಣೆಗಳನ್ನು ಮಾಡುವುದರಲ್ಲಿ ಮುಂದಿದ್ದಾರೆ. ಆದರೆ ಬೇರು ಮಟ್ಟದಲ್ಲಿ ಅನುಷ್ಠಾನ ಶೂನ್ಯ ಎಂದರು.
ಅವರ ಬಳಿ ದುಡ್ಡಿಲ್ಲ. ಕರ್ನಾಟಕದಲ್ಲಿ ಜಲಜೀವನ್ ಮಿಷನ್‌ನಲ್ಲಿ ₹3500 ಕೋಟಿ ಕೊಡಬೇಕು. ಆದರೆ ನೀಡಿರುವುದು ₹500 ಕೋಟಿ ಮಾತ್ರ. ನಾವು ಕೇಳಿದಾಗ, ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಕೆಲಸ ನಿಲ್ಲಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ನಿಭಾಯಿಸುತ್ತಿದೆ. ಉಳಿದ ₹3000 ಕೋಟಿ ಮೊತ್ತವನ್ನು ನಾವೇ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗೆ ಸೀಮಿತವಾಗಿದೆ. ಆದರೆ ಅವುಗಳ ಪರಿಪೂರ್ಣ ಅನುಷ್ಠಾನ ಎಂದಿಗೂ ನಡೆದಿಲ್ಲ ಎಂದರು.




