ಬೆಂಗಳೂರು: ಕಳೆದ ಎರಡು ತಿಂಗಳಿಂದ ತೀವ್ರ ರೀತಿಯಲ್ಲಿ ಸದ್ದು ಮಾಡುತ್ತಿರುವ ಬಿಜೆಪಿ ಭಿನ್ನಮತ ಇದೀಗ ದೆಹಲಿಯ ಅಂಗಳಕ್ಕೆ ತಲುಪಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂದು ಪಟ್ಟು ಹಿಡಿದಿರುವ ಭಿನ್ನಮತೀಯ ನಾಯಕರು ಇದಕ್ಕಾಗಿ ಹೈಕಮಾಂಡ್ ಮನವೊಲಿಕೆಗೆ ಮುಂದಾಗಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಶಾಸಕರಾದ ಚಂದ್ರಪ್ಪ, ಬಿ ಪಿ ಹರೀಶ್ ಮತ್ತು ಎನ್.ಆರ್ ಸಂತೋಷ್ ದೆಹಲಿಗೆ ತೆರಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ಮೊದಲಾದವರು ದೆಹಲಿಗೆ ತೆರಳಲಿದ್ದಾರೆ.
ಈಗಾಗಲೇ ಮಾಜಿ ಸಚಿವ ಅರವಿಂದ ಲಿಂಬಾವಳಿ, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಅಧ್ಯಕ್ಷ ಸ್ಥಾನದಿಂದ ಬದಲಾಯಿಸದೆ ಹೋದಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆಯಲಿದೆ ಎಂದು ಹೇಳಿದ್ದಾರೆ.
ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಲ್ಲಿ ವಿಫಲರಾಗಿದ್ದಾರೆ ಹಿರಿಯ ನಾಯಕರ ಬಗ್ಗೆ ಯಾವುದೇ ಗೌರವ ಹೊಂದಿಲ್ಲ ಆಡಳಿತ ರೋಡ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ನಡ್ಡಾ ಅವರಲ್ಲಿ ಆಪಾದಿಸಿರುವುದಾಗಿ ಗೊತ್ತಾಗಿದೆ.
ಇನ್ನು ದೆಹಲಿಗೆ ತೆರಳುವ ಕುರಿತಂತೆ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಪಕ್ಷವನ್ನು ಕುಟುಂಬ ರಾಜಕಾರಣದಿಂದ ಮುಕ್ತ ಮಾಡಬೇಕು ಎಂಬ ಹೋರಾಟ ನಡೆಯುತ್ತಿದ್ದು ಈ ಬಗ್ಗೆ ಹೈಕಮಾಂಡ್ ಗಮನ ಸೆಳೆಯುತ್ತೇವೆ ಎಂದರು.
ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಲ್ಲಿ ನಮ್ಮ ಬಣದ ಯಾರಾದರೂ ಒಬ್ಬರು ಸ್ಪರ್ಧೆ ಮಾಡುತ್ತೇವೆ. ಆದರೆ ಅದಕ್ಕೂ ಮೊದಲು ಈಗ ಘೋಷಣೆಯಾಗಿರುವ ಜಿಲ್ಲಾಧ್ಯಕ್ಷರನ್ನ ಬದಲಾಯಿಸಬೇಕು ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇವೆ ಎಂದರು.




