ಚಿತ್ರದುರ್ಗ: 2025-26ನೇ ಸಾಲಿಗೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದ ಕ್ರೀಡಾ ವಸತಿ ಶಾಲೆಗೆ ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ 2025-26ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಭಾವಂತ ಬಾಲಕ ಹಾಗೂ ಬಾಲಕಿಯರನ್ನು ಗುರುತಿಸಿ ಕ್ರೀಡಾಶಾಲೆಗೆ ಪ್ರವೇಶ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರವೇಶ ಪಡೆದ ಬಾಲಕ-ಬಾಲಕಿಯರಿಗೆ ಇಲಾಖೆಯ ವತಿಯಿಂದ ಉಚಿತವಾಗಿ ಊಟ, ವಸತಿ ಮತ್ತು ಕ್ರೀಡಾ ಪರಿಣಿತರುಗಳಿಂದ ತರಬೇತಿಯನ್ನು ನೀಡಿ ಅತ್ಯುತ್ತಮ ಕ್ರೀಡಾಪುಟಗಳನ್ನಾಗಿ ರೂಪುಗೊಳಿಸಿ ರಾಜ್ಯ, ರಾಷ್ಟ್ರ, ಅಂತ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ರೀತಿಯಲ್ಲಿ ತರಬೇತಿಗೊಳಿಸಲಾಗುವುದು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 4ನೇ ತರಗತಿಯಲ್ಲಿ ಓದುತ್ತಿರುವ ಮತ್ತು 2025ರ ಜೂನ್ 1ಕ್ಕೆ 10 ವರ್ಷ ಮತ್ತು 11 ವರ್ಷ ಮೀರದ ಬಾಲಕ ಮತ್ತು ಬಾಲಕಿಯರು ಆಯ್ಕೆಯಲ್ಲಿ ಭಾಗವಹಿಸಬಹುದು.
ಆಯ್ಕೆಯಲ್ಲಿ ಅಭ್ಯರ್ಥಿಗಳು ದೈಹಿಕ ಸಾಮರ್ಥ್ಯ, ಶಕ್ತಿ, ಚಾಕಚಕ್ಯತೆ, ಸಹಿಷ್ಣುತೆ, ಕುಶಲತೆ, ವೇಗ ಹಾಗೂ ಆಯಾ ಕ್ರೀಡೆಗೆ ಅಗತ್ಯವಿರುವ ಎತ್ತರ ಪರೀಕ್ಷಿಸಿ ಒಟ್ಟಾರೆ ಶೇ.50 ಕ್ಕೂ ಹೆಚ್ಚು ಅಂಕಗಳನ್ನು ಪಡೆದವರಿಗೆ ಯೋಗ್ಯತಾನುಸಾರ ಆಯ್ಕೆಗೆ ಪರಿಗಣಿಸಲಾಗುವುದು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಆಯ್ಕೆ ನಡೆಸಲಾಗುತ್ತಿದ್ದು, ಆಯ್ಕೆ ನಡೆಯುವ ಸ್ಥಳ, ವೇಳೆ ಹಾಗೂ ದಿನಾಂಕಗಳ ವಿವರ ಈ ಕೆಳಗಿನಂತಿದೆ. ಫೆ.11 ರಂದು ಬೆಳಿಗ್ಗೆ 11 ರಿಂದ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣ, ಫೆ.12 ರಂದು ಬೆಳಿಗ್ಗೆ 11 ರಿಂದ ಹಿರಿಯೂರು ತಾಲ್ಲೂಕು ಕ್ರೀಡಾಂಗಣ, ಫೆ.13 ರಂದು ಬೆಳಿಗ್ಗೆ 11 ರಿಂದ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಜಿಲ್ಲಾ ಮಟ್ಟದ ಆಯ್ಕೆಯನ್ನು ಫೆ.13 ರಿಂದ 15 ರವರೆಗೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ತಾಲ್ಲೂಕು ಕೇಂದ್ರಗಳಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದಲ್ಲಿ ಫೆ.13 ರಿಂದ ಫೆ.15 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯುವ ಆಯ್ಕೆ ಟ್ರಯಲ್ಸ್‍ನಲ್ಲಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದೆ. ಆಯ್ಕೆಯಲ್ಲಿ ಭಾಗವಹಿಸುವ ಬಾಲಕ-ಬಾಲಕಿಯರಿಗೆ ಯಾವುದೇ ರೀತಿಯ ಭತ್ಯೆಯನ್ನು ಇಲಾಖೆ ವತಿಯಿಂದ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ದೂರವಾಣಿ ಸಂಖ್ಯೆ 9611673475, ಅಥ್ಲೆಟಿಕ್ಸ್ ತರಬೇತುದಾರರು ತಿಪ್ಪಣ್ಣ ಎಸ್. ಮಾಳಿ ದೂರವಾಣಿ ಸಂಖ್ಯೆ 9380889647 ಗೆ ಸಂಪರ್ಕಿಸಬೇಕು.




