ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,000/-ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025ನೇ ಫೆಬ್ರವರಿ 12ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು.




