ಎಸ್ಎಸ್ಎಲ್ಸಿ ಪರೀಕ್ಷೆ-2025: ಕಿರು ಪುಸ್ತಕ, ಮೈಕ್ರೋ ಬುಕ್, ಮೈಕ್ರೋ ಜೆರಾಕ್ಸ್ ಮಾರಾಟ ಮತ್ತು ಉಪಯೋಗ ನಿರ್ಬಂಧ
ಬಳ್ಳಾರಿ: ಜಿಲ್ಲೆಯಲ್ಲಿ ಪ್ರಸ್ತಕ ವರ್ಷ ನಡೆಯುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ಮುಕ್ತ, ಪಾರದರ್ಶಕವಾಗಿ ನಡೆಸಲು ಮತ್ತು ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಜಿಲ್ಲೆಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಕಿರು ಪುಸ್ತಕಗಳು, ಮೈಕ್ರೋ ಬುಕ್, ಮೈಕ್ರೋ ಜೆರಾಕ್ಸ್ ಗಳನ್ನು ಮಾರಾಟ, ಖರೀದಿ ಮತ್ತು ಶಾಲಾ ಆವರಣದಲ್ಲಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ತಿಳಿಸಿದ್ದಾರೆ.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಈ ಕುರಿತು ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಸುತ್ತೋಲೆ ಹೊರಡಿಸಿರುತ್ತಾರೆ. ಹಾಗಾಗಿ ಜಿಲ್ಲೆಯಲ್ಲಿನ ಎಲ್ಲಾ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಜೆರಾಕ್ಸ್ ಸೆಂಟರ್ಗಳ ಮಾಲೀಕರು ಕಿರು ಪುಸ್ತಕಗಳನ್ನು ಹಾಗೂ ಮೈಕ್ರೋ ಬುಕ್, ಮೈಕ್ರೋ ಜೆರಾಕ್ಸ್ಗಳನ್ನು ಮಾರಾಟ ಮಾಡುವುದಾಗಲೀ, ಖರೀದಿಸುವುದಾಗಲೀ ಅಥವಾ ಬಳಸುವುದಾಗಲೀ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದಿದ್ದಾರೆ.
ಇದಕ್ಕೆ ಸಂಬಂಧಿಸಿದ ಯಾವುದೇ ಕಾನೂನು ಬಾಹಿರವಾಗಿ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನಿನಲ್ಲಿನ ಅವಕಾಶ ಬಳಸಿಕೊಂಡು ಇಲಾಖೆಯು ವಿಚಾರಣೆ ನಡೆಸಿ ಇಂತಹ ಪ್ರಕರಣಗಳಲ್ಲಿ ಭಾಗಿಯಾದವರಿಗೆ 3ರಿಂದ 5 ವರ್ಷ ಜೈಲು, 5 ಲಕ್ಷ ದಂಡ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ.



